ಶ್ರೀಕೃಷ್ಣಮಠಕ್ಕೆ ರಾಷ್ಟ್ರಪತಿ ಭೇಟಿ: ನಗರದಾದ್ಯಂತ ಪೊಲೀಸ್ ಕಣ್ಗಾವಲು

ಉಡುಪಿ: ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಗುರುವಾರ ಉಡುಪಿಗೆ ಭೇಟಿ ನೀಡಲಿದ್ದು, ಮೊದಲು ಶ್ರೀಕೃಷ್ಣಮಠಕ್ಕೆ ತೆರಳಿ ದೇವರ ದರ್ಶನ ಪಡೆಯುವರು. ಬಳಿಕ ಪೇಜಾವರ ಮಠದಲ್ಲಿ ನಡೆಯುವ ಪೇಜಾವರ ಶ್ರೀಗಳ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸುವರು. ರಾಷ್ಟ್ರಪತಿಗಳನ್ನು ಬರಮಾಡಿಕೊಳ್ಳಲು ಜಿಲ್ಲಾಡಳಿತ ಸಕಲ ರೀತಿಯ ಸಿದ್ದತೆ ಮಾಡಿಕೊಂಡಿದೆ. ರಾಷ್ಟ್ರಪತಿ ಮಧ್ಯಾಹ್ನ 11 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದಲ್ಲಿ ಆಗಮಿಸಿ ಅಲ್ಲಿಂದ 11.45ಕ್ಕೆ ಸುಮಾರಿಗೆ ವಾಯು ಸೇನಾ ವಿಶೇಷ ಹೆಲಿಕಾಪ್ಟರ್ನಲ್ಲಿ ಆದಿ ಉಡುಪಿಗೆ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಆದಿ ಉಡುಪಿ […]