ಸುಖೋಯ್ ಯುದ್ದವಿಮಾನದಲ್ಲಿ ಹಾರಾಟ ನಡೆಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ತಮ್ಮ ಚೊಚ್ಚಲ ಫೈಟರ್ ಜೆಟ್ ಹಾರಾಟ ನಡೆಸಿದರು. ಅಸ್ಸಾಂನ ಆಯಕಟ್ಟಿನ ವಾಯುನೆಲೆಯಾದ ತೇಜ್‌ಪುರ್ ಏರ್‌ಫೋರ್ಸ್ ಸ್ಟೇಷನ್‌ನಲ್ಲಿ ಸುಖೋಯ್ 30 MKI ಯುದ್ಧ ವಿಮಾನದಲ್ಲಿ ದ್ರೌಪದಿ ಮುರ್ಮು ಹಾರಾಟ ನಡೆಸಿದ್ದಾರೆ. ಭಾರತೀಯ ಸಶಸ್ತ್ರ ಪಡೆಗಳ ಸರ್ವೋಚ್ಚ ಕಮಾಂಡರ್ ಆಗಿರುವ ರಾಷ್ಟ್ರಪತಿಗಳು, ಬ್ರಹ್ಮಪುತ್ರ ಮತ್ತು ತೇಜ್‌ಪುರ ಕಣಿವೆಯ ಮೇಲೆ ಸುಮಾರು 30 ನಿಮಿಷಗಳ ಕಾಲ ಹಾರಾಟ ನಡೆಸಿ ವಾಯುಪಡೆಯ ನಿಲ್ದಾಣಕ್ಕೆ ಮರಳಿದರು. ಹಾರಾಟದ ಬಗ್ಗೆ ಪ್ರತಿಕ್ರಿಯಿಸಿದ ಮುರ್ಮು, “ಅಚ್ಛಾ ಲಗಾ” ಎಂದಿದ್ದಾರೆ. […]

ಭಾರತದ 50ನೇ ಮುಖ್ಯ ನ್ಯಾಯಮೂರ್ತಿಯಾಗಿ ಜಸ್ಟಿಸ್ ಡಿ. ವೈ ಚಂದ್ರಚೂಡ್ ಪ್ರಮಾಣ ವಚನ ಸ್ವೀಕಾರ

ನವದೆಹಲಿ: ಭಾರತದ 50ನೇ ಮುಖ್ಯ ನ್ಯಾಯಮೂರ್ತಿಯಾಗಿ ಸುಪ್ರೀಂ ಕೋರ್ಟ್‌ನ ಹಿರಿಯ ನ್ಯಾಯಮೂರ್ತಿ ಧನಂಜಯ ವೈ ಚಂದ್ರಚೂಡ್ ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು. ಇಲ್ಲಿನ ರಾಷ್ಟ್ರಪತಿ ಭವನದ ಮೆಜೆಸ್ಟಿಕ್ ಲಾನ್ಸ್‌ನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಮಾಣ ವಚನ ಬೋಧಿಸಿದರು. ಇವರ ತಂದೆ ವೈ ವಿ ಚಂದ್ರಚೂಡ್ ರವರು ಫೆಬ್ರವರಿ 22, 1978 ರಿಂದ ಜುಲೈ 11, 1985 ರವರೆಗೆ ಸುದೀರ್ಘ ಸೇವೆ ಸಲ್ಲಿಸಿದ ಭಾರತದ ಮುಖ್ಯ ನ್ಯಾಯಮೂರ್ತಿಯಾಗಿದ್ದರು. ನ್ಯಾಯಮೂರ್ತಿ ಚಂದ್ರಚೂಡ್ ರವರು ನವೆಂಬರ್ 10, 2024 ರವರೆಗೆ […]

ದ್ರೌಪದಿ ಮುರ್ಮು ಅವರನ್ನು ರಾಷ್ಟ್ರಪತ್ನಿ ಎಂದು ಕರೆದ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ: ಮಹಿಳಾ ಆಯೋಗದಿಂದ ನೋಟಿಸ್

ನವದೆಹಲಿ: ರಾಷ್ಟ್ರೀಯ ಮಹಿಳಾ ಆಯೋಗ (ಎನ್‌ಸಿಡಬ್ಲ್ಯು) ಕಾಂಗ್ರೆಸ್ ಸಂಸದ ಅಧೀರ್ ರಂಜನ್ ಚೌಧುರಿ ಅವರಿಗೆ ಖುದ್ದು ಹಾಜರಾಗುವಂತೆ ಮತ್ತು ಅಧ್ಯಕ್ಷೆ ದ್ರೌಪದಿ ಮುರ್ಮು ಅವರನ್ನು ರಾಷ್ಟ್ರಪತ್ನಿ ಎಂದು ಸಂಬೋಧಿಸಿರುವ ಹೇಳಿಕೆಗಳಿಗೆ ಲಿಖಿತ ವಿವರಣೆಯನ್ನು ನೀಡುವಂತೆ ನೋಟಿಸ್ ಕಳುಹಿಸಿದೆ. ಮುಂದಿನ ತಿಂಗಳು 3ಕ್ಕೆ ವಿಚಾರಣೆ ನಿಗದಿಯಾಗಿದೆ. ಈ ವಿಚಾರದಲ್ಲಿ ಮಧ್ಯಪ್ರವೇಶಿಸುವಂತೆ ಮತ್ತು ಅವರ ಅವಹೇಳನಕಾರಿ ಹೇಳಿಕೆಗಾಗಿ ಚೌಧರಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಯೋಗವು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದಿದೆ. ಘಟನೆಯ ವಿವರ: ಸಂಸತ್ತಿನಲ್ಲಿ […]

ಡಿ.27: ಬೆಳಿಗ್ಗೆ 7ರಿಂದ 2ರ ವರೆಗೆ ಶ್ರೀಕೃಷ್ಣಮಠದಲ್ಲಿ ದೇವರ ದರ್ಶನ ಇಲ್ಲ

ಉಡುಪಿ: ಉಡುಪಿ ಶ್ರೀಕೃಷ್ಣಮಠಕ್ಕೆ ಡಿ. 27ರಂದು ರಾಷ್ಟ್ರಪತಿಗಳು ಭೇಟಿ ನೀಡಲಿರುವುದರಿಂದ ಅಂದು ಬೆಳಿಗ್ಗೆ 7ಗಂಟೆಯಿಂದ 2ರ ವರೆಗೆ ದೇವರ ದರ್ಶನ ಇರುವುದಿಲ್ಲ. 2 ಗಂಟೆಯ ಬಳಿಕ ಭಕ್ತಾದಿಗಳಿಗೆ ಭೋಜನ ಪ್ರಸಾದದ ವ್ಯವಸ್ಥೆ ಇರುತ್ತದೆ ಎಂದು ಮಠದ ಪ್ರಕಟಣೆ ತಿಳಿಸಿದೆ.