ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ಕುರಿತು ವರದಿ ಪರಿಶೀಲಿಸಿ ಶೀಘ್ರ ತೀರ್ಮಾನ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಉಡುಪಿ: ಶಾಲಾ ಪಠ್ಯಪುಸ್ತಕ ಪರಿಷ್ಕರಣೆಯ ವರದಿಯನ್ನು ಪರಿಶೀಲಿಸಿದ ಬಳಿಕ ಶೀಘ್ರದಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಬುಧವಾರ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ 8 ನೇ ವರ್ಷಾಚರಣೆ ಅಂಗವಾಗಿ ಉಡುಪಿ ಜಿಲ್ಲಾ ಭಾರತೀಯ ಜನತಾ ಪಕ್ಷದ ವತಿಯಿಂದ ಆಯೋಜಿಸಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಶಾಲಾ ಪಠ್ಯಪುಸ್ತಕ ಪರಿಷ್ಕರಣೆಗೆ ಸಂಬಂಧಿಸಿದಂತೆ ಈಗಾಗಲೇ ಪುಸ್ತಕದಲ್ಲಿರುವ ಪಾಠಗಳನ್ನು ತೆಗೆಯುವಂತೆ ಕೆಲ ಸಾಹಿತಿಗಳು ಹೇಳುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಬೊಮ್ಮಾಯಿ, ಪಠ್ಯಪುಸ್ತಕ ಪರಿಷ್ಕರಣೆಯ ಬಗ್ಗೆ ಸಮಗ್ರ […]