ಉಡುಪಿ: ಪತ್ರಕರ್ತರ ವಾರ್ಷಿಕ ಕ್ರೀಡಾಕೂಟದ ಬಹುಮಾನ ವಿತರಣೆ; ಕುಟುಂಬ ‌ಸಮ್ಮಿಲನ‌

ಉಡುಪಿ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಪ್ರೆಸ್ ಕ್ಲಬ್ ಜಂಟಿ ಆಶ್ರಯದಲ್ಲಿ ಪತ್ರಕರ್ತರ ವಾರ್ಷಿಕ ಕ್ರೀಡಾಕೂಟದ ಬಹುಮಾನ ವಿತರಣೆ ಹಾಗೂ ಕುಟುಂಬ ಸಮ್ಮಿಲನ ಕಾರ್ಯಕ್ರಮ ಶನಿವಾರ ನಗರದ ಪುರಭವನದಲ್ಲಿ ನಡೆಯಿತು. ಕಾರ್ಯಕ್ರದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಸಿಂಡಿಕೇಟ್ ಬ್ಯಾಂಕ್ ಮಣಿಪಾಲದ ವಲಯ ಕಚೇರಿಯ ಪ್ರಧಾನ ವ್ಯವಸ್ಥಾಪಕ ಭಾಸ್ಕರ್ ಹಂದೆ ಮಾತನಾಡಿ, ಪತ್ರಕರ್ತರು ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಕೆಲಸವನ್ನು ಸದಾ ಎಚ್ಚರಿಕೆಯಿಂದ ಮಾಡಿಕೊಂಡು ಬರುತ್ತಿದ್ದಾರೆ. ಇತ್ತೀಚೆಗೆ ಮಾದಕ ದ್ರವ್ಯ ಸೇವನೆ ವಿರುದ್ದ ಕೂಡ ದನಿ ಎತ್ತಿ […]