ಸಚಿವ ಸಂಪುಟ ವಿಸ್ತರಣೆಗೆ ಶಾಸಕರ ಒತ್ತಡ
ಬೆಂಗಳೂರು: ಉಪಚುನಾವಣೆ ಮುಗಿಯುತ್ತಿದ್ದಂತೆ ಸಚಿವ ಸಂಪುಟ ವಿಸ್ತರಣೆ ಕೂಗು ಜೋರಾಗಿ ಕೇಳಿಬರುತ್ತಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸಚಿವ ಸಂಪುಟ ವಿಸ್ತರಣೆಯ ಸುಳಿವು ನೀಡುತ್ತಿದ್ದಂತೆ ಅವರನ್ನು ಭೇಟಿ ಮಾಡಿ, ಒತ್ತಡ ಹೇರುವ ಶಾಸಕರ ಸಂಖ್ಯೆಯೂ ಹೆಚ್ಚಾಗಿದೆ. ಬುಧವಾರ ಬೆಳಿಗ್ಗೆ ಸುಮಾರು ಆರಕ್ಕೂ ಹೆಚ್ಚು ಶಾಸಕರು ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮಾತನಾಡಿದ್ದಾರೆ. ಅದಕ್ಕೆ ಮುನ್ನ ಈ ಶಾಸಕರು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿಯನ್ನು ಭೇಟಿ ಮಾಡಿ ಈ ಸಂಬಂಧ ಮಾತುಕತೆ ನಡೆಸಿರುವುದು ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದೆ. ಶಾಸಕರಾದ ಮುರುಗೇಶ […]