ಗ್ರಾಹಕರ ಕಿಸೆ ಸುಡುತ್ತಿದೆ ಅಡುಗೆ ಅನಿಲ: 1000 ರೂ ಗಡಿ ದಾಟಿದ ಎಲ್‌ಪಿಜಿ ಸಿಲಿಂಡರ್ ಬೆಲೆ
ಬೆಂಗಳೂರು: ದೇಶೀಯ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಗಳು ಏರಿಕೆಯಾಗಿದ್ದು, ಮೇ ತಿಂಗಳಲ್ಲಿ ಇದು ಎರಡನೇ ಏರಿಕೆಯಾಗಿದೆ. ದೇಶೀಯ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಈ ತಿಂಗಳಲ್ಲಿ ಎರಡನೇ ಬಾರಿಗೆ ಮತ್ತೆ ಹೆಚ್ಚಿಸಲಾಗಿದೆ. ಗೃಹಬಳಕೆಯ ಎಲ್‌ಪಿಜಿ ಬೆಲೆ ಪ್ರತಿ ಸಿಲಿಂಡರ್‌ಗೆ 3.50 ರೂಪಾಯಿ ಏರಿಕೆಯಾಗಿದ್ದು, ಗುರುವಾರ ವಾಣಿಜ್ಯ ಸಿಲಿಂಡರ್‌ನ ಬೆಲೆ 8 ರೂಪಾಯಿ ಏರಿಕೆಯಾಗಿದೆ. ಈ ಹೆಚ್ಚಳದೊಂದಿಗೆ ದೇಶದಾದ್ಯಂತ ಎಲ್ಲಾ ನಗರಗಳಲ್ಲಿ ಎಲ್‌ಪಿಜಿ ಬೆಲೆ 1000 ರೂ ಗಡಿ ದಾಟಲಿದೆ.