ಪ್ರಾಥಮಿಕ ಶಿಕ್ಷಣವನ್ನು ಮಾತೃಭಾಷೆಯಲ್ಲೇ ನೀಡಬೇಕು: ಆರ್‌ಎಸ್‌ಎಸ್

ನವದೆಹಲಿ: ಹೊಸ ಶಿಕ್ಷಣ ನೀತಿಯಲ್ಲಿ ಸೂಚಿಸಿರುವ ತ್ರಿಭಾಷಾ ನೀತಿಯ ಬಗ್ಗೆ ವಿವಾದ ಎದ್ದಿರುವ ನಡುವೆಯೇ ರಾಷ್ಟ್ರೀಯ ಸ್ವಯಂ ಸೇವಕ ಸಂಘವು ಪ್ರಾಥಮಿಕ ಶಿಕ್ಷಣವನ್ನು ಮಾತೃಭಾಷೆಯಲ್ಲೇ ನೀಡಬೇಕು ಎಂದು ಹೇಳಿದೆ. ‘ಭಾರತದಲ್ಲಿರುವ ಎಲ್ಲಾ ಭಾಷೆಗಳು ರಾಷ್ಟ್ರೀಯ ಭಾಷೆಗಳು ಎಂದು ಆರ್‌ಎಸ್‌ಎಸ್ ಹೇಳಿದೆ. ಜನರು ತಮ್ಮ ರಾಜ್ಯಗಳಲ್ಲಿ ತಮ್ಮದೇ ಆದ ಭಾಷೆ ಮಾತನಾಡುತ್ತಾರೆ. ಪ್ರಾಥಮಿಕ ಶಿಕ್ಷಣವನ್ನು ತಮ್ಮ ರಾಜ್ಯದ ಭಾಷೆಯಲ್ಲೇ ನೀಡಬೇಕು. ಎಲ್ಲರೂ ಅದನ್ನೇ ಒತ್ತಾಯಿಸುತ್ತಿದ್ದಾರೆ. ಇದು ಈಗಾಗಲೇ ಸ್ಥಾಪಿತವಾಗಿರುವ ವಿಚಾರ’ ಎಂದು ದೆಹಲಿಯಲ್ಲಿ ನಡೆದ ಮೂರು ದಿನಗಳ ‘ಸಂಘ […]