75ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ
ನವದೆಹಲಿ: ದೇಶದ 75ನೇ ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ಕೆಂಪುಕೋಟೆಯಲ್ಲಿ ಭಾನುವಾರ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಧ್ವಜಾರೋಹಣ ನೆರವೇರಿಸಿದರು. ನಂತರ ಅವರು ದೇಶವನ್ನುದ್ದೇಶಿಸಿ ಭಾಷಣ ಮಾಡಿದರು. ಭಾಷಣದ ಪ್ರಮುಖಾಂಶಗಳು: -ರಾಷ್ಟ್ರೀಯ ಹೈಡ್ರೋಜನ್ ಮಿಷನ್ ಘೋಷಣೆ. ನಾವು ಭಾರತವನ್ನು ಹಸಿರು ಜಲಜನಕದ ಉತ್ಪಾದನೆ ಮತ್ತು ರಫ್ತು ಮಾಡುವ ಕೇಂದ್ರವನ್ನಾಗಿಸಬೇಕು. -ಜನ ಔಷಧಿ ಯೋಜನೆಯಿಂದಾಗಿ ಬಡವರು, ಅಗತ್ಯವಿರುವವರಿಗೆ ಕೈಗೆಟುಕುವ ದರದಲ್ಲಿ ಔಷಧಗಳು ಸಿಗುತ್ತಿವೆ. 75,000 ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಬ್ಲಾಕ್ ಮಟ್ಟದಲ್ಲಿ ಆಸ್ಪತ್ರೆಗಳ ಸಂಪರ್ಕದ ಕುರಿತು ಕಾರ್ಯಾಚರಿಸುತ್ತಿದ್ದೇವೆ. […]