ಯಶಸ್ವಿ ಜನಪ್ರತಿನಿಧಿಯಾಗಿ ಎರಡು ದಶಕಗಳನ್ನು ಪೂರೈಸಿದ ಪ್ರಧಾನಿ ನರೇಂದ್ರ ಮೋದಿ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಚುನಾಯಿತ ಜನಪ್ರತಿನಿಧಿಯಾಗಿ 20 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದ್ದಾರೆ. ಒಮ್ಮೆಯೂ ಸೋಲು ಕಾಣದೇ ಯಶಸ್ವಿ ಚುನಾಯಿತ ಪ್ರತಿನಿಧಿಯಾಗಿ ಮುಖ್ಯಮಂತ್ರಿಯಾಗಿ, ಪ್ರಧಾನ ಮಂತ್ರಿಯಂತಹ ಉನ್ನತ ಹುದ್ದೆಗಳಲ್ಲಿ ಅವರು ಮುನ್ನಡೆಯುತ್ತಿದ್ದಾರೆ. ಗುಜರಾತ್ ಮುಖ್ಯಮಂತ್ರಿಯಾಗಿರಲಿ ಅಥವಾ ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರದ ಪ್ರಧಾನಿಯಾಗಿರಲಿ, ಮೋದಿ ಅವರು ಸದಾ ಜನರ ಕಲ್ಯಾಣಕ್ಕಾಗಿ ದುಡಿಯುತ್ತಿದ್ದಾರೆ ಎಂದು ಬಿಜೆಪಿ ಶ್ಲಾಘಿಸಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು, ‘ಅಕ್ಟೋಬರ್ 7, 2001ರಲ್ಲಿ ಮೋದಿ ಅವರು ಗುಜರಾತ್ ಮುಖ್ಯಮಂತ್ರಿಯಾಗಿ ಮೊದಲ […]