ಏ.15ರಂದು ಮೀನು ಮಾರಾಟ ಫೆಡರೇಶನ್ ನಿಂದ ಪ್ರಧಾನಮಂತ್ರಿ ಮತ್ಸ್ಯಸಂಪದ ಯೋಜನೆ ತರಬೇತಿ ಶಿಬಿರ: ಯಶ್‍ಪಾಲ್ ಸುವರ್ಣ

ಉಡುಪಿ: ಭಾರತ ಸರಕಾರದ ಪ್ರಾದೇಶಿಕ ತರಬೇತಿ ಕೇಂದ್ರ ಬೆಂಗಳೂರು, ರಾಷ್ಟ್ರೀಯ ಸಹಕಾರಿ ಅಭಿವೃದ್ಧಿ ನಿಗಮ (ಓಅಆಅ), ಮೀನುಗಾರಿಕಾ ಇಲಾಖೆ, ಮೀನುಗಾರಿಕಾ ಸಚಿವಾಲಯ, ಪಶುಸಂಗೋಪನೆ ಮತ್ತು ಡೈರಿ ಹಾಗೂ ದ.ಕ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ಮಂಗಳೂರು ಜಂಟಿಯಾಗಿ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯ ಬಗ್ಗೆ ಫೆಡರೇಶನಿನ ಮಂಗಳೂರಿನ ಮುಳಿಹಿತ್ಲುವಿನಲ್ಲಿರುವ ಪ್ರಧಾನ ಕಚೇರಿಯಲ್ಲಿ ಏ.15ರಂದು ಬೆಳಿಗ್ಗೆ 10 ಗಂಟೆಗೆ ಒಂದು ದಿನದ ತರಬೇತಿ ಶಿಬಿರವನ್ನು ಆಯೋಜಿಸಿರುವುದಾಗಿ ಫೆಡರೇಷನ್ ಅಧ್ಯಕ್ಷ ಯಶ್‍ಪಾಲ್ ಸುವರ್ಣ ತಿಳಿಸಿದ್ದಾರೆ. […]