ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರನ್ನು ತರಗತಿಯಿಂದ ಹೊರಹಾಕಿದ ಪ್ರಾಂಶುಪಾಲರು; ಉಡುಪಿ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ವಿವಾದ
ಉಡುಪಿ: ಹಿಜಾಬ್ ಧರಿಸಿ ಬರುತ್ತಿದ್ದ ವಿದ್ಯಾರ್ಥಿನಿಯರನ್ನು ಪ್ರಾಂಶುಪಾಲರು ತರಗತಿಯಿಂದ ಹೊರಹಾಕಿದ ಘಟನೆ ಉಡುಪಿ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಇಂದು ಬೆಳಕಿಗೆ ಬಂದಿದೆ. ಕಳೆದ ಮೂರು ದಿನಗಳಿಂದ ಆರು ವಿದ್ಯಾರ್ಥಿನಿಯರು ಹಿಜಾಬ್ ಧರಿಸಿಕೊಂಡು ಬರುತ್ತಿದ್ದು, ಅವರಿಗೆ ಪ್ರಾಂಶುಪಾಲರು ತರಗತಿ ಪ್ರವೇಶಕ್ಕೆ ನಿರಾಕರಿಸುತ್ತಿದ್ದಾರೆ ಎನ್ನಲಾಗಿದೆ. ಹೀಗಾಗಿ ಮೂರು ದಿನಗಳಿಂದ ವಿದ್ಯಾರ್ಥಿನಿಯರು ಕಾಲೇಜಿನ ಹೊರಗಡೆ ನಿಲ್ಲುತ್ತಿದ್ದಾರೆ ಎಂದು ತಿಳಿದುಬಂದಿದೆ. ಹಿಂದು ಧರ್ಮದಲ್ಲಿ ಕುಂಕುಮ ಇಡುವಂತೆ ಮುಸ್ಲಿಂ ಧರ್ಮದಲ್ಲಿ ಹಿಜಾಬ್ ಹಾಕುತ್ತೇವೆ. ಆದರೆ ಇದಕ್ಕೆ ಇಲ್ಲಿ ವಿರೋಧ ಮಾಡಲಾಗುತ್ತಿದೆ. ಸರಕಾರಿ […]