ಉಡುಪಿಯ ಕೈದಿಯಿಂದ ಸಹ ಕೈದಿಗಳ ಮೇಲೆ ಮಾರಣಾಂತಿಕ ಹಲ್ಲೆ

ಶಿವಮೊಗ್ಗ: ಕೈದಿಗಳು ಪರಸ್ಪರ ಹೊಡೆದಾಡಿಕೊಂಡ ಘಟನೆ ಶಿವಮೊಗ್ಗ ಜಿಲ್ಲೆಯ ಮಲವಗೊಪ್ಪದ ಕೇಂದ್ರ ಕಾರಾಗೃಹದಲ್ಲಿ ನಡೆದಿದೆ. ಈ ಮಾರಾಮಾರಿಯಲ್ಲಿ ಮೂರು ಕೈದಿಗಳಿಗೆ ಗಾಯವಾಗಿದ್ದು, ಆ ಪೈಕಿ ಓರ್ವ ಕೈದಿಯ ಸ್ಥಿತಿ ಗಂಭೀರವಾಗಿದೆ. ನಿನ್ನೆ ರಾತ್ರಿ ಊಟ ಮುಗಿದ ಮೇಲೆ ಕುಡಿಯುವ ನೀರಿನ ವಿಚಾರಕ್ಕೆ ಕೈದಿಗಳ ನಡುವೆ ಜಗಳ ಆರಂಭವಾಗಿದೆ ಎನ್ನಲಾಗಿದೆ. ಉಡುಪಿ ಮೂಲದ ಪ್ರಶಾಂತ್ ಎಂಬ ಕೈದಿ ಸಹ ಕೈದಿಗಳಾದ ಮಲ್ಲೇಶ್, ದೇವೇಂದ್ರಪ್ಪ ಹಾಗೂ ಚಿಕ್ಕಮಗಳೂರಿನ ಬೆನಕಶೆಟ್ಟಿ ಎಂಬುವವರಿಗೆ ಲೋಟದಿಂದ ಹಲ್ಲೆ ನಡೆಸಿ, ಚಮಚದಿಂದ ಇರಿದಿದ್ದಾನೆ. ಘಟನೆಯಲ್ಲಿ ಮಲ್ಲೇಶ್ […]