‘ಗೋವಿಗಾಗಿ ಮೇವು’ ಅಭಿಯಾನದ ಸಂಘಟಕ ಪ್ರಥ್ವಿರಾಜ್ ಶೆಟ್ಟಿ ಬಿಲ್ಲಾಡಿ ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷರಾಗಿ ಆಯ್ಕೆ
ಕೋಟ: ಭಾರತೀಯ ಜನತಾ ಪಕ್ಷದ ಉಡುಪಿ ಜಿಲ್ಲಾ ಯುವ ಮೋರ್ಚಾ ಜಿಲ್ಲಾಧ್ಯಕ್ಷರಾಗಿ ಯುವ ನಾಯಕ ಪ್ರಥ್ವಿರಾಜ್ ಶೆಟ್ಟಿ ಬಿಲ್ಲಾಡಿ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿ ಜೀವನದಿಂದಲೇ ವಿದ್ಯಾರ್ಥಿ ಸಂಘಟನೆಗಳಲ್ಲಿ ಸಕ್ರಿಯರಾಗಿದ್ದ ಇವರು ಹಲವಾರು ಯಶಸ್ವಿ ವಿದ್ಯಾರ್ಥಿ ಹೋರಾಟಗಳನ್ನು ಸಂಘಟಿಸಿ, ಯಶಸ್ವಿ ನಾಯಕರಾಗಿ ಗುರುತಿಸಿಕೊಂಡಿದ್ದರು. ಅನಂತರ ರಾಜಕೀಯ ಪ್ರವೇಶಿಸಿ ಬಿಜೆಪಿ ಪಂಚಾಯತ್ ರಾಜ್ ಪ್ರಕೋಷ್ಠದ ರಾಜ್ಯ ಸಮಿತಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. ‘ಗೋವಿಗಾಗಿ ಮೇವು’ ಎನ್ನುವ ಯಶಸ್ವಿ ಅಭಿಯಾನವನ್ನು ಸಂಘಟಿಸಿ, ಗೋ ಶಾಲೆಗಳಿಗೆ ವಿವಿಧ ಸಂಘಟನೆಗಳಿಂದ ಮೇವು ಒದಗಿಸುವುದರ ಮೂಲಕ ರಾಜ್ಯ […]