ಗಗನಕ್ಕೇರಿದ ಖಾಸಗಿ ಬಸ್ ಟಿಕೆಟ್ ದರ: ದೀಪಾವಳಿ ಸಂದರ್ಭದಲ್ಲಿ ಪ್ರಯಾಣಿಕರಿಗೆ ಅಧಿಕೃತ ಹೊರೆ

ಬೆಂಗಳೂರು: ಇನ್ನೇನು ದೀಪಾವಳಿ ಹಬ್ಬಕ್ಕೆ ಕೆಲವೇ ದಿನಗಳು ಉಳಿದಿದ್ದು, ಕೆಲಸದ ಪ್ರದೇಶಗಳಿಂದ ತಮ್ಮ ಹುಟ್ಟೂರಿಗೆ ಹಿಂದಿರುಗುವವರ ದಂಡೇ ಬಸ್ ನಿಲ್ದಾಣಗಳಲ್ಲಿ ಕಾಣಸಿಗುತ್ತವೆ. ಈ ಮಧ್ಯೆ ಖಾಸಗಿ ಬಸ್ ದರಗಳು ಗಗನಕ್ಕೇರಿವೆ. ಬೆಂಗಳೂರಿನಿಂದ ಹುಬ್ಬಳ್ಳಿ-ಧಾರವಾಡ, ಮಂಗಳೂರು, ಬೆಳಗಾವಿ, ವಿಜಯಪುರ, ಕಲಬುರಗಿ, ಹೈದರಾಬಾದ್ ಮತ್ತು ಚೆನ್ನೈ ನಗರಗಳಿಗೆ ಸಾಗುವ ಖಾಸಗಿ ಬಸ್ ದರಗಳು ಏರಿಕೆಯಾಗಿವೆ. ಹವಾನಿಯಂತ್ರಿತವಲ್ಲದ ಸ್ಲೀಪರ್ ಬಸ್‌ನಲ್ಲಿ ಸಾಮಾನ್ಯವಾಗಿ 800 ರೂಪಾಯಿ ಬೆಲೆಯ ಸೀಟು ಇದೀಗ 2000 ರೂಪಾಯಿಗೆ ಮಾರಾಟವಾಗುತ್ತಿದೆ. ಹವಾನಿಯಂತ್ರಿತ ಸ್ಲೀಪರ್ ಬಸ್‌ ನಲ್ಲಿ ಉಳಿದ ದಿನಗಳಲ್ಲಿ […]