ಕೋವಿಡ್ 19: ಪ್ರತೀ ಬುಧವಾರದಂದು ಬೂಸ್ಟರ್ ಡೋಸ್ ಲಸಿಕಾ ಮೇಳ ಆಯೋಜನೆ
ಉಡುಪಿ: ಜಿಲ್ಲೆಯಲ್ಲಿ ಕೋವಿಡ್ ಲಸಿಕಾ ಮೇಳವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಆಶಾ ಕಾರ್ಯಕರ್ತೆಯರು ಎಲ್ಲಾ ಮನೆಗಳಿಗೆ ಭೇಟಿ ನೀಡಿ, 60 ವರ್ಷ ಮೇಲ್ಪಟ್ಟವರಲ್ಲಿ ಮುನ್ನೆಚ್ಚರಿಕಾ ಡೋಸ್ ಪಡೆಯಲು ಬಾಕಿ ಇರುವವರನ್ನು ಗುರುತಿಸಿ, ಬುಧವಾರ ನಡೆಯುವ ಲಸಿಕಾ ಮೇಳಕ್ಕೆ ಬರಲು ಪ್ರೇರೇಪಿಸಬೇಕು. ಆಸ್ಪತ್ರೆಗೆ ಬರಲು ಸಾಧ್ಯವಾಗದ ಹಾಗೂ ಹಾಸಿಗೆ ಹಿಡಿದಿರುವ 60 ವರ್ಷ ಮೇಲ್ಪಟ್ಟವರಿದ್ದಲ್ಲಿ ಅವರಿಗೆ ಮೊಬೈಲ್ ಲಸಿಕಾ ಶಿಬಿರ ವ್ಯವಸ್ಥೆ ಮಾಡಿ, ಲಸಿಕೆ ನೀಡಬೇಕು. ಪಂಚಾಯತ್ ವ್ಯಾಪ್ತಿಯಲ್ಲಿ ವೈದ್ಯಾಧಿಕಾರಿಗಳೊಂದಿಗೆ ಪಂಚಾಯತ್ ಅಧ್ಯಕ್ಷರು, ಸದಸ್ಯರು ಹಾಗೂ ಗ್ರಾಮ ಕಾರ್ಯಪಡೆ ಸದಸ್ಯರ […]