ಲಕ್ನೋ: ಧಾರ್ಮಿಕ ಭಾವನೆಗಳನ್ನು ಕೆರಳಿಸಿದ ಆರೋಪ; ಉದಯನಿಧಿ ಸ್ಟಾಲಿನ್ ಮತ್ತು ಪ್ರಿಯಾಂಕ್ ಖರ್ಗೆ ವಿರುದ್ಧ ಎಫ್‌ಐಆರ್

ಲಕ್ನೋ: ಧಾರ್ಮಿಕ ಭಾವನೆಗಳನ್ನು ಕೆರಳಿಸಿದ ಆರೋಪದ ಮೇಲೆ ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮತ್ತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ಪ್ರಿಯಾಂಕ್ ಖರ್ಗೆ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಸನಾತನ ಧರ್ಮವನ್ನು ನಿರ್ಮೂಲನೆ ಮಾಡಲು ಸ್ಟಾಲಿನ್ ಕರೆ ನೀಡಿದ್ದಕ್ಕಾಗಿ ಮತ್ತು ಅವರ ಹೇಳಿಕೆಯನ್ನು ಬೆಂಬಲಿಸಿದ್ದಕ್ಕಾಗಿ ಪ್ರಿಯಾಂಕ್ ಖರ್ಗೆ ವಿರುದ್ದ ಕೇಸು ದಾಖಲಿಸಲಾಗಿದೆ. ಮಂಗಳವಾರ ಉತ್ತರ ಪ್ರದೇಶದ ರಾಂಪುರದ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯಲ್ಲಿ ಇಬ್ಬರ ವಿರುದ್ಧ ಐಪಿಸಿಯ ಸೆಕ್ಷನ್ 295 […]

ರಾಜಕೀಯ ಶಿಷ್ಟಾಚಾರ ಮೀರುತ್ತಿರುವ ಕಾಂಗ್ರೆಸ್ ಹಿಂಬಾಲಕರು; ಬೇಕಾಬಿಟ್ಟಿ ಹೇಳಿಕೆ ನೀಡುತ್ತಿರುವ ಮಂತ್ರಿ ಮಾಗಧರು ಹದ್ದು ಮೀರಿ ವರ್ತಿಸುವುದು ತರವಲ್ಲ: ಕಾರ್ಕಳ ಬಿಜೆಪಿ

ಕಾರ್ಕಳ: ರಾಜ್ಯದಲ್ಲಿ ಕಾಂಗ್ರೆಸ್‌ ಸರಕಾರ ಬಹುಮತದಿಂದ ಅಧಿಕಾರಕ್ಕೆ ಬಂದ ಬಳಿಕ ಕೆಲವು ಸಚಿವರು, ನಾಯಕರು ಮತ್ತು ಆ ನಾಯಕರ ಚೇಲಾಗಳು ಶಿಷ್ಟಾಚಾರ ಮೀರಿ ವರ್ತಿಸುತ್ತಿರುವುದು ಕಂಡುಬರುತ್ತಿದೆ ಎಂದು ಭಾರತೀಯ ಜನತಾ ಪಾರ್ಟಿ ಕಾರ್ಕಳ ಇದರ ಅಧ್ಯಕ್ಷ ಮಹಾವೀರ್ ಹೆಗ್ಡೆ ಹೇಳಿದ್ದಾರೆ. ಸಚಿವರಾದ ಪ್ರಿಯಾಂಕ್‌ ಖರ್ಗೆ, ಎಂ.ಬಿ.ಪಾಟೀಲ್‌ ಸಹಿತ ಕೆಲವರು ತಮ್ಮ ಇಲಾಖೆಗಳಿಗೆ ಸಂಬಂಧಪಡದ, ಸಂಘರ್ಷಕ್ಕೆ ಕಾರಣವಾಗಬಹುದಾದಂಥ ಹೇಳಿಕೆಗಳನ್ನು ನೀಡಿ ಹಲವು ಸಲ ಸರಕಾರಕ್ಕೆ ಮುಜುಗರವುಂಟಾಗುವ ಪರಿಸ್ಥಿತಿ ಉಂಟು ಮಾಡಿದ್ದಾರೆ. ಸೋತ ಪಕ್ಷವನ್ನು ಟೀಕಿಸುವ ಭರದಲ್ಲಿ ಅವರು ನೀಡುತ್ತಿರುವ […]

ಶಾಂತಿ ಕದಡಿದರೆ ಭಜರಂಗದಳ ಮತ್ತು ಆರ್‌ಎಸ್‌ಎಸ್‌ ನಿಷೇಧ: ಪ್ರಿಯಾಂಕ್ ಖರ್ಗೆ

ಬೆಂಗಳೂರು: ರಾಜ್ಯದಲ್ಲಿ ಶಾಂತಿ ಕದಡಿದರೆ ಭಜರಂಗದಳ ಮತ್ತು ಆರ್‌ಎಸ್‌ಎಸ್‌ನಂತಹ ಸಂಘಟನೆಗಳನ್ನು ತಮ್ಮ ಸರ್ಕಾರ ನಿಷೇಧಿಸಲಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಸಚಿವ ಪ್ರಿಯಾಂಕ್ ಖರ್ಗೆ ಬುಧವಾರ ಹೇಳಿದ್ದಾರೆ. ಇಲ್ಲಿ ಸುದ್ದಿಗಾರರೊಂದಿಗೆ ಸಂವಾದ ನಡೆಸಿದ ಖರ್ಗೆ, ‘ಬಿಜೆಪಿಗೆ ಕಷ್ಟವಾದರೆ ಪಾಕಿಸ್ತಾನಕ್ಕೆ ಹೋಗಲಿ’ ಎಂದು ಹೇಳಿದರು. ಕರ್ನಾಟಕವನ್ನು ಸ್ವರ್ಗವನ್ನಾಗಿ ಮಾಡುತ್ತೇವೆ ಎಂದು ಭರವಸೆ ನೀಡಿದ್ದೇವೆ, ಶಾಂತಿ ಕದಡಿದರೆ ಅದು ಭಜರಂಗದಳ ಅಥವಾ ಆರ್‌ಎಸ್‌ಎಸ್ ಎಂದು ಪರಿಗಣಿಸುವುದಿಲ್ಲ, ಕಾನೂನು ಕೈಗೆತ್ತಿಕೊಂಡಾಗ ಬಜರಂಗದಳ, ಆರ್‌ಎಸ್‌ಎಸ್ ಸೇರಿದಂತೆ ಯಾವುದೇ ಸಂಘಟನೆಗೆ ನಿಷೇಧ ಹೇರಲಾಗುವುದು ಎಂದು […]