ಸೋನಿಯಾಗಾಂಧಿ ರಾಜ್ಯಸಭೆಗೆ; ಪ್ರಿಯಾಂಕಾಗೆ ರಾಯಬರೇಲಿ? ಕಾಂಗ್ರೆಸ್ ಪಾಳಯದಲ್ಲಿ ರಾಜಕೀಯ ಲೆಕ್ಕಾಚಾರ
ನವದೆಹಲಿ: ಸಕ್ರಿಯ ರಾಜಕೀಯಕ್ಕೆ ಪ್ರವೇಶಿಸಿದ ಐದು ವರ್ಷಗಳ ನಂತರ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ತಮ್ಮ ತಾಯಿ ಸೋನಿಯಾ ಗಾಂಧಿ ದಶಕಗಳಿಂದ ಪ್ರತಿನಿಧಿಸುತ್ತಿರುವ ಉತ್ತರ ಪ್ರದೇಶದ ರಾಯ್ ಬರೇಲಿಯಿಂದ ಲೋಕಸಭೆಗೆ ಪಾದಾರ್ಪಣೆ ಮಾಡಲಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್ ಪಕ್ಷದ ನಾಯಕಿ ಸೋನಿಯಾಗಾಂಧಿ ಬಹುತೇಕ ರಾಜಸ್ಥಾನದಿಂದ ರಾಜ್ಯಸಭೆ ಚುನಾವಣೆಗೆ ಸ್ಪರ್ಧಿಸುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ಫೆಬ್ರವರಿ 27 ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷವು ಸಜ್ಜಾಗುತ್ತಿದ್ದು, 77 ವರ್ಷದ ಸೋನಿಯಾ ಗಾಂಧಿಗೆ ರಾಜಸ್ಥಾನ ಸುರಕ್ಷಿತ ಸ್ಥಾನ ಎಂದು […]
ಸಂಕಷ್ಟದಲ್ಲಿರುವ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆ ವರದಾನ: ವೆರೋನಿಕಾ ಕರ್ನೆಲಿಯೊ
ಉಡುಪಿ: ಬಿಜೆಪಿ ಸರಕಾರದ ಬೆಲೆ ಏರಿಕೆಯಿಂದ ಸಂಕಷ್ಟದಲ್ಲಿರುವ ಮಹಿಳೆಯರಿಗೆ ಪ್ರಿಯಾಂಕ ಗಾಂಧಿಯವರು ಕರ್ನಾಟಕದಲ್ಲಿ ಘೋಷಿಸಿದ ಗೃಹಲಕ್ಷ್ಮೀ ಯೋಜನೆ ವರದಾನವಾಗಲಿದೆ ಎಂದು ಕೆಪಿಸಿಸಿ ವಕ್ತಾರರಾದ ವೆರೋನಿಕಾ ಕರ್ನೆಲಿಯೋ ಅಭಿಪ್ರಾಯ ಪಟ್ಟಿದ್ದಾರೆ. ಪ್ರಿಯಾಂಕ ಗಾಂಧಿಯವರು ಕರ್ನಾಟಕದಲ್ಲಿ ಘೋಷಿಸಿದ ಗೃಹಲಕ್ಷ್ಮಿ ಯೋಜನೆಯನ್ನು ಮಹಿಳಾ ವರ್ಗ ತುಂಬಾ ಸಂತೋಷದಿಂದ ಸ್ವಾಗತಿಸುತ್ತೇವೆ. ಬಿಜೆಪಿ ಸರ್ಕಾರದ ಆಡಳಿತದಿಂದ ಜನರ ಜನಜೀವನ ತೀರ ಸಂಕಷ್ಟದಲ್ಲಿದೆ. ದಿನನಿತ್ಯದ ವಸ್ತುಗಳ ಬೆಲೆ ದಿನದಿಂದ ದಿನಕ್ಕೆ ಏರುತ್ತಿದೆ. ಗ್ಯಾಸ್ ಸಿಲಿಂಡರ್ ನ ಬೆಲೆ ಗಗನಕ್ಕೆ ಏರಿದೆ. ನಮ್ಮ ಯುವಕ ಯುವತಿಯರು ಯಾವುದೇ […]