ಕೃಷ್ಣ ವೇಷ, ನೃತ್ಯ ಸ್ಪರ್ಧೆಯ ವಿಜೇತರಿಗೆ ಇಂಧನ ಸಚಿವರಿಂದ ಬಹುಮಾನ ವಿತರಣೆ

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮೈಸೂರು ವಿಭಾಗ ಇವರ ವತಿಯಿಂದ ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಶುಕ್ರವಾರ ಆಯೋಜಿಸಲಾದ ರಾಜ್ಯ ಮಟ್ಟದ ಶ್ರೀ ಕೃಷ್ಣ ಜಯಂತಿ ಆಚರಣೆಯ ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ನಡೆದ ಕುಣಿದಾಡೋ ಕೃಷ್ಣ ಕುಣಿದಾಡೋ ನೃತ್ಯ ಸ್ಪರ್ಧೆಯಲ್ಲಿ ಅತ್ಯುತ್ತಮ ಕೃಷ್ಣನ ವೇಷ ಮತ್ತು ನೃತ್ಯ ಸ್ಪರ್ಧೆಯ ವಿಜೇತರಿಗೆ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ ಸುನೀಲ್ ಕುಮಾರ ಬಹುಮಾನ ವಿತರಿಸಿದರು. ಶ್ರೀ ವಿದ್ಯಾಸಾಗರ ತೀರ್ಥ […]