ವಿಜ್ಞಾನ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ

ಉಡುಪಿ, ಮಾ.03: ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ (ಕೆ.ಎಸ್.ಸಿ.ಎಸ್.ಟಿ) ಯು ವಿವಿಧ ಸಂಸ್ಥೆಗಳ ಸಹಯೋಗದೊಂದಿಗೆ ರಾಷ್ಟ್ರೀಯ ವಿಜ್ಞಾನ ದಿನದ ಅಂಗವಾಗಿ ಆಯೋಜಿಸಲಾಗಿದ್ದ “ಸುಸ್ಥಿರ ಭವಿಷ್ಯಕ್ಕಾಗಿ ವಿಜ್ಞಾನದ ಉಪಯೋಗ” ಕುರಿತ ಆನ್‌ಲೈನ್ ವೈಜ್ಞಾನಿಕ ಸ್ಪರ್ಧೆಗಳಲ್ಲಿ ಜಿಲ್ಲೆಯ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದು, ವಿಜೇತ ವಿದ್ಯಾರ್ಥಿಗಳಿಗೆ ಕೋಟತಟ್ಟು ಶಿವರಾಂ ಕಾರಂತ ಥೀಮ್ ಪಾರ್ಕ್ನಲ್ಲಿ ಇತ್ತೀಚೆಗೆ ಜರುಗಿದ ಕಾರ್ಯಕ್ರಮದಲ್ಲಿ ಹಿಂದುಳಿದ ವರ್ಗಗಳ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಚಿವ ಶ್ರೀನಿವಾಸ ಪೂಜಾರಿ ಅವರು ಬಹುಮಾನ ವಿತರಿಸಿ ಶುಭ ಹಾರೈಸಿದರು. […]