ರಾಜ್ಯ ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ಮದರ್ ತೆರೇಸಾ ಶಾಲೆಯ ವಿದ್ಯಾರ್ಥಿಗಳಿಗೆ ಬಹುಮಾನ.

ಕುಂದಾಪುರ: ಶಂಕರನಾರಾಯಣದ ಮದರ್ ತೆರೇಸಾ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳು ಕೊಪ್ಪಳ ಜಿಲ್ಲೆಯಲ್ಲಿ ನಡೆದ 2025–26ನೇ ಸಾಲಿನ ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯ ಹೈಸ್ಕೂಲ್ ವಿಭಾಗದ ರಸಪ್ರಶ್ನೆ ಸ್ಪರ್ಧೆಯಲ್ಲಿ ದ್ವಿತೀಯ ಬಹುಮಾನವನ್ನು ಗಳಿಸಿದ್ದಾರೆ. ಮದರ್ ತೆರೇಸಾ ಶಾಲೆಯ 10ನೇ ತರಗತಿಯ ವಿದ್ಯಾರ್ಥಿಗಳಾದ ತೊಂಬಟ್ಟು-ಮಚ್ಚೆಟ್ಟು ಗ್ರಾಮದ ನಿವಾಸಿಗಳಾದ ಗಣಪತಿ ಪೂಜಾರಿ ಹಾಗೂ ನಾಗರತ್ನ ದಂಪತಿಯ ಪುತ್ರ ಪ್ರೀತಮ್ ಜಿ. ಪೂಜಾರಿ ಮತ್ತು ಉಳ್ಳೂರು-74 ಗ್ರಾಮದ ನಿವಾಸಿಗಳಾದ ಸುಭಾಷ್ ಚಂದ್ರ ಶೆಟ್ಟಿ ಹಾಗೂ ಶ್ರೀಲತಾ ಎಸ್. ಶೆಟ್ಟಿ ದಂಪತಿಯ ಪುತ್ರ ರಿಷಿ […]