ಪೇಜಾವರ ಶ್ರೀಗಳ ಮಹಾಸಮಾರಾಧನೋತ್ಸವ; ಪರಿಶಿಷ್ಟ ಜನರ ಕಾಲೊನಿಯಲ್ಲಿ ಅನ್ನದಾನ

ಉಡುಪಿ: ಪೇಜಾವರ ಶ್ರೀ ವಿಶ್ವೇಶ ತೀರ್ಥಶ್ರೀಪಾದರ ಮಹಾ ಸಮಾರಾಧನೋತ್ಸವದ ಪ್ರಯುಕ್ತ ಬೆಂಗಳೂರು ಪೂರ್ಣಪ್ರಜ್ಞ ವಿದ್ಯಾಪೀಠ ಉಡುಪಿ, ಶ್ರೀಕೃಷ್ಣ ಮಠ, ಶ್ರೀ ಪೇಜಾವರ ಮಠ ಸೇರಿದಂತೆ ದೇಶಾದ್ಯಂತ ಇರುವ ಪೇಜಾವರ ಮಠದ ಶಾಖೆಗಳು, ಅತಿಥಿಗೃಹ, ಶಾಲೆ ಕಾಲೇಜು ಅನಾಥಾಶ್ರಮ ಸೇವಾಧಾಮ ವಿದ್ಯಾರ್ಥಿನಿ ನಿಲಯಗಳೂ ಸೇರಿದಂತೆ 85 ಕ್ಕೂ ಅಧಿಕ ಕಡೆಗಳಲ್ಲಿ ಗುರುವಾರ ವಿವಿಧ ಧಾರ್ಮಿಕ ವಿಧಿವಿಧಾನಗಳು, ಸಾಮೂಹಿಕ ಅನ್ನಾರಾಧನೆ ವಿದ್ವತ್ ಗೋಷ್ಠಿ ವೈಭವದಿಂದ ನೆರವೇರಿತು. ಉಡುಪಿ ಪೇಜಾವರ ಮಠದಲ್ಲಿಯೂ ಬೆಳಿಗ್ಗೆ ಪವಮಾನ ಹೋಮ, ಭಜನೆ, ಪಾರಾಯಣ, ಪಾದುಕಾ ಪೂಜಾ […]