ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ: ಬಿಜೆಪಿ ಶಾಸಕರ ನಿಯೋಗದಿಂದ ಡಿಜಿ&ಐಜಿಪಿ ಕಚೇರಿಗೆ ಭೇಟಿ; ಮೂವರ ಬಂಧನ
ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದ ಆರೋಪದ ಎಫ್ಎಸ್ಎಲ್(FSL) ವರದಿ ಬಹಿರಂಗಪಡಿಸಲು ಬಿಜೆಪಿ ಒತ್ತಾಯಿಸಿದ್ದು,, ಈ ವಿಚಾರವಾಗಿ ಬಿಜೆಪಿ ಶಾಸಕರ ನಿಯೋಗ ಡಿಜಿ&ಐಜಿಪಿ ಕಚೇರಿಗೆ ಭೇಟಿ ನೀಡಿದೆ. ಮೊದಲು FSL ಕಚೇರಿಗೆ ತೆರಳಲು ನಿರ್ಧರಿಸಿದ್ದ ಬಿಜೆಪಿ ನಿಯೋಗ ನಂತರ ಡಿಜಿ&ಐಜಿಪಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿದೆ. ಬಿಜೆಪಿ ಶಾಸಕರಾದ ರವಿಸುಬ್ರಹ್ಮಣ್ಯ, ಉದಯ್ ಗರುಡಾಚಾರ್, ಸಿ.ಕೆ.ರಾಮಮೂರ್ತಿ, ಧೀರಜ್ ಮುನಿರಾಜುರಿಂದ ಬೆಂಗಳೂರಿನ ನೃಪತುಂಗರಸ್ತೆಯಲ್ಲಿರುವ ಡಿಜಿ&ಐಜಿಪಿ ಕಚೇರಿ ಭೇಟಿ ನೀಡಿ ಶೀಘ್ರದಲ್ಲೇ FSL ವರದಿ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದಾರೆ. ಬೆಂಗಳೂರಲ್ಲಿ […]