ಪಾಕಿಸ್ತಾನ ಪರ ಘೋಷಣೆ; ಬಜರಂಗದಳ ರಾಜ್ಯ ಸಂಚಾಲಕ ಸುನಿಲ್ ಕೆ.ಆರ್.‌ಖಂಡನೆ

ಉಡುಪಿ: ಬೆಳ್ತಂಗಡಿಯ ಉಜಿರೆಯಲ್ಲಿ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಗೆದ್ದ ಎಸ್ ಡಿ‌ಪಿಐ ಅಭ್ಯರ್ಥಿಯ ಪರ ಕಾರ್ಯಕರ್ತರು ಘೋಷಣೆ ಹಾಕುತ್ತ ಶತ್ರುದೇಶ ಪಾಕಿಸ್ತಾನ ಪರ ಘೋಷಣೆ ಕೂಗಿರುವುದು ಅತ್ಯಂತ ಖಂಡನೀಯ ಎಂದು ಬಜರಂಗ ದಳದ ರಾಜ್ಯ ಸಂಚಾಲಕ ಸುನಿಲ್ ಕೆ.ಆರ್. ತೀವ್ರವಾಗಿ ಖಂಡಿಸಿದ್ದಾರೆ. ಪದೇ ಪದೇ ದೇಶ ವಿರೋಧಿ ಚಟುವಟಿಕೆಯಲ್ಲಿ ತೊಡಗುವ ಎಸ್ ಡಿಪಿಐ ಸಂಘಟನೆಯನ್ನು ಸರಕಾರ ತಕ್ಷಣ ನಿಷೇಧಿಸಬೇಕು. ಘೋಷಣೆ ಕೂಗಿದ ಬಗ್ಗೆ ಕೂಲಂಕುಷ ತನಿಖೆ ನಡೆಸಿ, ತಪ್ಪಿತಸ್ಥರಿಗೆ ಶಿಕ್ಷೆ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ.