ತಕ್ಷಶಿಲೆ ವಿಶ್ವವಿದ್ಯಾನಿಲಯಗಳ ತಾಯಿ: ಹಿರಿಯ ವಿದ್ವಾಂಸ ಪ್ರೊ. ಕೆ.ಪಿ. ರಾವ್‌ ಅಭಿಮತ

ಉಡುಪಿ: ತಕ್ಷಶಿಲೆ ಕೇವಲ ವಿಶ್ವವಿದ್ಯಾಲಯ ಮಾತ್ರವಲ್ಲ. ಅದು ವಿಶ್ವವಿದ್ಯಾನಿಲಯ ಹಾಗೂ ಭಾಷೆಗಳ ತಾಯಿ ಎಂದು ಹಿರಿಯ ವಿದ್ವಾಂಸ ಪ್ರೊ. ಕೆ.ಪಿ. ರಾವ್‌ ಅಭಿಪ್ರಾಯಪಟ್ಟರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಸಹಯೋಗದಲ್ಲಿ ನಗರದ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಮಂಗಳವಾರ ನಡೆದ ಸಾಧಕರೊಂದಿಗೆ ಸಂವಾದ ಹಾಗೂ ಜಿಲ್ಲಾ ಕವಿಗೋಷ್ಠಿ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು. ತಕ್ಷಶಿಲೆ ವಿದ್ಯಾ ಕೇಂದ್ರ ಆಗಿದ್ದರೂ ಅದಕ್ಕೆ ವಿಶ್ವವಿದ್ಯಾನಿಲಯ ಮಾನ್ಯತೆ ಇರಲಿಲ್ಲ. ಆ ಯೋಗ್ಯತೆಯೂ ಅದಕ್ಕೆ ಇಲ್ಲ […]