ಆತ್ಮಹತ್ಯೆ ಜಾಗತಿಕ ಸವಾಲಾಗಿ ಪರಿಣಮಿಸಿದೆ: ಪ್ರೊ.ಕೆ.ಎಸ್. ಅಡಿಗ

ಉಡುಪಿ: ಇತ್ತೀಚಿನ ದಿನಗಳಲ್ಲಿ ಆತ್ಮಹತ್ಯೆ ಸಾವಿಗೆ ಪ್ರಮುಖ ಕಾರಣವಾಗುತ್ತಿದ್ದು, ಇದು ಜಾಗತಿಕ ಸವಾಲಾಗಿ ಪರಿಣಮಿಸಿದೆ ಎಂದು ಉಡುಪಿ ಉಪೇಂದ್ರ ಪೈ ಸ್ಮಾರಕ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ. ಕೆ.ಎಸ್. ಅಡಿಗ ಹೇಳಿದರು. ಕಮಲ ಎ. ಬಾಳಿಗಾ ಚಾರಿಟೇಬಲ್‌ ಟ್ರಸ್ಟ್‌ ಮುಂಬೈ, ಡಾ. ಎ.ವಿ. ಬಾಳಿಗಾ ಸ್ಮಾರಕ ಆಸ್ಪತ್ರೆ ದೊಡ್ಡಣಗುಡ್ಡೆ ಹಾಗೂ ಅಜ್ಜರಕಾಡು ಜಿಲ್ಲಾ ಸರ್ಕಾರಿ ಆಸ್ಪತ್ರೆಯ ಸಹಯೋಗದಲ್ಲಿ ಬಾಳಿಗಾ ಆಸ್ಪತ್ರೆಯ ಕಮಲ ಬಾಳಿಗಾ ಸ್ಮಾರಕ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ […]