ಆತ್ಮಗೌರವಕ್ಕೆ ವಂಚನೆ ಮಾಡದೆ ಬದುಕುವುದೇ ಮಾನವ ಹಕ್ಕು: ಪ್ರಕಾಶ್ ಕಣಿವೆ

ಉಡುಪಿ: ಯಾವುದೇ ಸುಸಂಸ್ಕೃತ ಸಮಾಜದಲ್ಲಿ ಆತ್ಮಗೌರವಕ್ಕೆ ವಂಚನೆ ಮಾಡದೆ ಸಮಾಧಾನವಾಗಿ ಬದುಕುವುದೇ ಮಾನವ ಹಕ್ಕು ಎಂದು ವೈಕುಂಠ ಬಾಳಿಗಾ ಕಾನೂನು ಕಾಲೇಜಿನ ಪ್ರಾಂಶುಪಾಲ ಪ್ರೊ. ಪ್ರಕಾಶ್‌ ಕಣಿವೆ ಹೇಳಿದರು. ಉಡುಪಿ ಎಂಜಿಎಂ ಕಾಲೇಜಿನ ಯುತ್‌ ರೆಡ್‌ಕ್ರಾಸ್‌ ಘಟಕದ ವತಿಯಿಂದ ಕಾಲೇಜಿನಲ್ಲಿ ಬುಧವಾರ ಆಯೋಜಿಸಿದ ವಿಶೇಷ ಉಪನ್ಯಾಸ ಹಾಗೂ ಸಂವಾದ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು. ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನವನ್ನು ನಿರ್ಲಕ್ಷ್ಯ ಮಾಡಿದರೆ, ಅದು ತಂದೆ ತಾಯಿಯ ಹಕ್ಕು ಉಲ್ಲಂಘನೆ ಆಗುತ್ತದೆ. ಅಲ್ಲದೆ, ಇದೂ ಅತೀ […]