ನಿಷೇಧಿತ ಪ್ಲಾಸ್ಟಿಕ್ ವಶ: ದಂಡ ವಸೂಲಿ

ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ಸಂತೆಕಟ್ಟೆಯಲ್ಲಿ ಇಂದು ನಿಷೇದಿತ ಪ್ಲಾಸ್ಟಿಕ್‌ಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿಗಳಿಗೆ ದಾಳಿ ನಡೆಸಿ 52 ಕೆ.ಜಿ ನಿಷೇಧಿತ ಪ್ಲಾಸ್ಟಿಕ್‌ಗಳನ್ನು ವಶಪಡಿಸಿಕೊಂಡು, 18,000 ರೂ. ದಂಡ ವಿಧಿಸಲಾಯಿತು ಹಾಗೂ ಉದ್ದಿಮೆಗಳಲ್ಲಿ ಏಕ ಬಳಕೆಯ ಪ್ಲಾಸ್ಟಿಕ್‌ಗಳನ್ನು ಉಪಯೋಗಿಸದ ಉದ್ದಿಮೆಯನ್ನು ಹಸಿರು ಸಂಸ್ಥೆ ಎಂದು ಘೋಷಿಸಲಾಯಿತು. ಈ ಸಂದರ್ಭದಲ್ಲಿ ನಗರಸಭೆಯ ಪರಿಸರ ಅಭಿಯಂತರರು, ಹಿರಿಯ ಆರೋಗ್ಯ ನಿರೀಕ್ಷಕರು, ಕಿರಿಯ ಆರೋಗ್ಯ ನಿರೀಕ್ಷಕರು, ಸ್ಯಾನಿಟರಿ ಸೂಪರ್‌ವೈಸರ್ ಹಾಗೂ ಪೌರಕಾರ್ಮಿಕರು ಭಾಗವಹಿಸಿದ್ದರು. ಸಾರ್ವಜನಿಕರು, ಉದ್ದಿಮೆದಾರರು, ವ್ಯಾಪಾರಿಗಳು ನಿಷೇಧಿತ ಪ್ಲಾಸ್ಟಿಕ್‌ಗಳನ್ನು ಉಪಯೋಗಿಸುವುದು […]