ಕಲಬೆರಕೆ ಉತ್ಪನ್ನ ಮಾರಾಟ ಮಾಡಿದರೆ ನಿರ್ದಾಕ್ಷಿಣ್ಯ ಕ್ರಮ: ಜಿಲ್ಲಾಧಿಕಾರಿ ಜಿ. ಜಗದೀಶ್

ಉಡುಪಿ: ಜನಸಾಮಾನ್ಯರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವಂತಹ ಕಲ ಬೆರೆಕೆ ಉತ್ಪನ್ನಗಳ ತಯಾರಕರು ಸೇರಿದಂತೆ ಮಾರಾಟಗಾರರ ಮೇಲೆ ಕಾನೂನಿನ ಅಡಿಯಲ್ಲಿ ನಿರ್ದಾಕ್ಷಿಣ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಜಿ ಜಗದೀಶ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಇಂದು ನಗರದ ಜಿಲ್ಲಾ ಪಂಚಾಯತ್ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಆಹಾರ ಸುರಕ್ಷತೆಯ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ಮಾರುಕಟ್ಟೆಗಳಲ್ಲಿ ಕಲಬೆರಕೆ ಉತ್ಪನ್ನಗಳು ಮಾರಾಟವಾಗುತ್ತಿವೆ ಎಂಬ ದೂರುಗಳು ಕೇಳಿಬರುತ್ತಿವೆ. ಇಂತಹ ಕಲಬೆರಕೆ […]