ಮಾಳದಲ್ಲಿ ಪ್ರವಾಸೋದ್ಯಮಕ್ಕೆ ಉತ್ತೇಜನ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

ಉಡುಪಿ: ನಿಸರ್ಗದತ್ತ ಪ್ರಕೃತಿ ಸೌಂದರ್ಯ ಹೊಂದಿರುವ ಮಾಳ ಗ್ರಾಮದಲ್ಲಿ, ಪರಿಸರಕ್ಕೆ ಪೂರಕವಾದ ಪ್ರವಾಸೋದ್ಯಮ ಚಟುವಟಿಕೆಗಳಿಗೆ ಉತ್ತೇಜನ ನೀಡಲು ಜಿಲ್ಲಾಡಳಿತ ಸಿದ್ಧವಿದ್ದು, ಇದಕ್ಕಾಗಿ ಅರಣ್ಯ ಇಲಾಖೆ ಹಾಗೂ ಗ್ರಾಮ ಪಂಚಾಯತ್ ಜೊತೆ ಚರ್ಚೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ಕಾರ್ಕಳ ತಾಲೂಕಿನ ಮಾಳ ಗ್ರಾಮದ ಮಲ್ಲಾರು ಶ್ರೀಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಮಾಳ ಗ್ರಾಮದಲ್ಲಿ ಇದುವರೆಗೆ ಸರ್ಕಾರದ […]