ಉಡುಪಿ ನಗರಸಭೆಯಲ್ಲಿ ಆಸ್ತಿ ತೆರಿಗೆ ವಂಚನೆ ಪ್ರಕರಣ- ಮಹಿಳೆ ಸಹಿತ ಇಬ್ಬರ ಬಂಧನ

ಉಡುಪಿ: ಉಡುಪಿ ನಗರಸಭೆಯ ಆಸ್ತಿ ತೆರಿಗೆ ಹಣವನ್ನು ದುರ್ಬಳಕೆ ಮಾಡಿ ಸರಕಾರಕ್ಕೆ ವಂಚನೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ ಮಹಿಳೆ ಸೇರಿದಂತೆ ಇಬ್ಬರನ್ನು ಉಡುಪಿ ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ನಗರಸಭೆ ಹೊರಗಡೆ ತೆರಿಗೆ ಸಲಹೆಗಾರ್ತಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಬನ್ನಂಜೆ ನಿವಾಸಿ ಶಾಲಿನಿ ಹಾಗೂ ಕುಕ್ಕಿಕಟ್ಟೆಯ ಗಣೇಶ್ ಎಂದು ಗುರುತಿಸಲಾಗಿದೆ. ಆನಂದ ಸುವರ್ಣ ಎಂಬವರು ಕಲ್ಮಾಡಿಯಲ್ಲಿರುವ ತನ್ನ ಕಟ್ಟಡಕ್ಕೆ ಸಂಬಂಧಪಟ್ಟಂತೆ 2025ರ ಅ.16ರಂದು 12 ವರ್ಷಗಳ ಆಸ್ತಿ ತೆರಿಗೆ ಮೊತ್ತ ಒಟ್ಟು 34,730 ರೂ. ಹಣವನ್ನು ನಗರಸಭೆ ಕಚೇರಿಯಲ್ಲಿ ಹೊರಗಡೆ […]