ವೇಶ್ಯಾವಾಟಿಕೆ ಅಪರಾಧವಲ್ಲ: ಮುಂಬೈ ಹೈಕೋರ್ಟ್ ನಿಂದ ಮಹತ್ವದ ತೀರ್ಪು

ಮುಂಬೈ: ವಯಸ್ಕ ಮಹಿಳೆಗೆ ತನ್ನ ವೃತ್ತಿಯನ್ನು ಆಯ್ಕೆ ಮಾಡಿಕೊಳ್ಳುವ ಹಕ್ಕಿದೆ. ಕಾನೂನಿನಡಿಯಲ್ಲಿ ವೇಶ್ಯಾವಾಟಿಕೆ ಕ್ರಿಮಿನಲ್ ಅಪರಾಧವಲ್ಲ ಎಂದು ಮುಂಬೈ ಹೈಕೋರ್ಟ್ ತಿಳಿಸಿದೆ. ಮುಂಬೈನಲ್ಲಿ ಬಂಧನಕ್ಕೊಳಗಾಗಿರುವ ಮೂವರು ಮಹಿಳಾ ಲೈಂಗಿಕ ಕಾರ್ಯಕರ್ತೆಯರ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಮುಂಬೈ ಹೈಕೋರ್ಟ್ ನ ನ್ಯಾಯಮೂರ್ತಿ ಪೃಥ್ವಿರಾಜ್ ಚೌಹಾಣ್‌ ಅವರ ನೇತೃತ್ವದ ನ್ಯಾಯಪೀಠ, ಈ ಅಭಿಪ್ರಾಯವನ್ನು ಮಂಡಿಸಿದ್ದು, 1956ರ ಅನೈತಿಕ ಚಟುವಟಿಕೆ (ತಡೆಗಟ್ಟುವಿಕೆ) ಕಾಯ್ದೆಯ ಅಡಿಯಲ್ಲಿ ವೇಶ್ಯಾವಾಟಿಕೆಯನ್ನು ಕ್ರಿಮಿನಲ್ ಅಪರಾಧವೆಂದು ಪರಿಗಣಿಸಲಾಗಿಲ್ಲ ಎಂದು ಪ್ರತಿಪಾದಿಸಿದೆ. ಮೂವರು ಮಹಿಳೆಯರು ವಯಸ್ಕರಾಗಿದ್ದಾರೆ. ಅವರು ಇಚ್ಚಿಸಿದಂತೆ […]