ಮಲ್ಪೆಯಲ್ಲಿ ಸಮುದ್ರಕ್ಕೆ ಧುಮುಕಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯ ರಕ್ಷಣೆ

ಉಡುಪಿ: ಮಲ್ಪೆ ‌ಸಮುದ್ರದಲ್ಲಿ ಮಹಿಳೆಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದಾಗ ಅವರನ್ನು ಮಲ್ಪೆ ಬೀಚ್ ನ ಲೈಫ್ ಗಾರ್ಡ್ಸ್ ರಕ್ಷಿಸಿದ ಘಟನೆ ಇಂದು ಸಂಜೆ ನಡೆದಿದೆ. ಮುಂಬಯಿ ಮೂಲದ 45 ವರ್ಷದ ಮಹಿಳೆಯೊಬ್ಬರು 15 ವರ್ಷದ ಮಗನೊಂದಿಗೆ ಮಲ್ಪೆ ಬೀಚ್ ಗೆ ಆಗಮಿಸಿದ್ದರು. ಬೀಚ್ ನಲ್ಲಿ ಈಗ ಮಳೆಯ ಕಾರಣ ಪ್ರವಾಸಿಗರು ನೀರಿಗೆ ಇಳಿಯದಂತೆ ತಡೆ ತಂತಿ ಹಾಕಿದ್ದರೂ, ಮಹಿಳೆ ಅದನ್ನು ಲೆಕ್ಕಿಸದೆ ಎರಡು‌ ಬಾರಿ ಸಮುದ್ರಕ್ಕೆ ಧುಮುಕಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ. ಇದನ್ನು ಗಮನಿಸಿದ ಅಲ್ಲಿನ ಲೈಫ್ ಗಾರ್ಡ್ಸ್ […]