ಮಹಿಳೆ ಮತ್ತು ಮಕ್ಕಳ ರಕ್ಷಣೆ ಆದ್ಯತೆಯಾಗಲಿ: ಜಿಲ್ಲಾಧಿಕಾರಿ     

ಉಡುಪಿ: ಸಮಾಜದಲ್ಲಿ ದುರ್ಬಲರಾದ ಮಹಿಳೆ ಮತ್ತು ಮಕ್ಕಳ ರಕ್ಷಣೆ  ಹಾಗೂ ಅವರುಗಳ ಮೇಲಾಗುವ ಶೋಷಣೆಗಳ ವಿರುದ್ಧ ಬೆನ್ನೆಲುಬಾಗಿ ಅವರ ಪರ ನಿಂತು ಕಾನೂನಿನ ಅಡಿಯಲ್ಲಿ ಎಲ್ಲಾ ರೀತಿಯ ಅವಶ್ಯವಿರುವ ನೆರವುಗಳನ್ನು ಒದಗಿಸಬೇಕು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ಇಂದು ಮಣಿಪಾಲದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕುರಿತ ಜಿಲ್ಲಾ ಮಟ್ಟದ ಸಮನ್ವಯ ಸಮಿತಿಯ ವಿವಿಧ ಸಭೆಗಳ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಕ್ಕಳ ಸರ್ವಾಂಗೀಣ ಅಭಿವೃದ್ಧಿ ಹಾಗೂ ಮಹಿಳೆಯರ ಸಬಲೀಕರಣ […]