ಗಣಿಗಾರಿಕೆ ವಿಷಯದಲ್ಲಿ ಕೊರಗರ ಮೇಲೆ ದೌರ್ಜನ್ಯ ಆರೋಪ; ಬ್ರಹ್ಮಾವರ ತಹಶಿಲ್ದಾರ್ ಕಚೇರಿ ಎದುರು ಪ್ರತಿಭಟನೆ

ಉಡುಪಿ: ಕೊರಗ ಕುಟುಂಬಗಳು ಹಲವು ದಶಕದಿಂದ ನಡೆಸಿಕೊಂಡು ಬಂದ ಸಾಂಪ್ರದಾಯಿಕ ಕಲ್ಲುಗಣಿಗಾರಿಕೆಯನ್ನು ಅನ್ಯರು‌ ಕಬಳಿಸಲು ಪ್ರಯತ್ನಿಸುತ್ತಿದ್ದು, ನಮ್ಮ ಮೇಲೆ ದೌರ್ಜನ್ಯ ನಡೆಸುತ್ತಿದ್ದಾರೆ ಎಂದು ಆರೋಪಿಸಿ,‌ ಗರಿಕೆಮಠ, ಅಚ್ಲಾಡಿಯ ಕೊರಗ ಕುಟುಂಬಗಳು ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ ಸಹಕಾರದಲ್ಲಿ ಬ್ರಹ್ಮಾವರ ತಹಶಿಲ್ದಾರ್ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿತು. ಈ‌ ಸಂದರ್ಭ ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟದ ಕಾರ್ಯದರ್ಶಿ ಸುಜಾತ ಮಾತನಾಡಿ, ಉಡುಪಿ ಜಿಲ್ಲೆಯ ಯಡ್ತಾಡಿ ಗ್ರಾಮದ ಸರ್ವೆ ನಂಬರ್ 145 ರಲ್ಲಿ 1.84 ಎಕ್ರೆ ಜಾಗದಲ್ಲಿ ಪರಿಶಿಷ್ಠ […]