ಕೊರಗರ ಮೇಲಿನ ದೌರ್ಜನ್ಯ ಖಂಡಿಸಿ ಕಾಂಗ್ರೆಸ್ ನಿಂದ ಪ್ರತಿಭಟನಾ ಪಾದಯಾತ್ರೆ

ಉಡುಪಿ: ಕೋಟತಟ್ಟು ಗ್ರಾಮದ ಚಿಟ್ಟಿಬೆಟ್ಟುನಲ್ಲಿ ನಡೆದ ಕೊರಗ ಸಮುದಾಯದ ಮೆಹಂದಿ ಕಾರ್ಯಕ್ರಮದಲ್ಲಿ ಪೊಲೀಸರ ದೌರ್ಜನ್ಯ ಖಂಡಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೇತೃತ್ವದಲ್ಲಿ ಬುಧವಾರ ಮಣಿಪಾಲದ ಸಿಂಡಿಕೇಟ್ ಸರ್ಕಲ್‌ನಿಂದ ಜಿಲ್ಲಾಧಿಕಾರಿಯ ಕಚೇರಿಯವರೆಗೆ ಬೃಹತ್ ಪ್ರತಿಭಟನಾ ಪಾದಯಾತ್ರೆ ಮೆರವಣಿಗೆ ನಡೆಸಲಾಯಿತು. ಪ್ರತಿಭಟನಾ ಪಾದಯಾತ್ರೆ ಮೆರವಣಿಗೆಯು ಅಂತ್ಯಗೊಂಡ ಬಳಿಕ ಜಿಲ್ಲಾಧಿಕಾರಿ ಕೂರ್ಮ ರಾವ್ ಅವರಿಗೆ ಮನವಿ ಸಲ್ಲಿಸಿ, ನ್ಯಾಯಯುತವಾದ ತನಿಖೆ ನಡೆಸಿ ಕೊರಗ ಸಮುದಾಯದ ಮನೆಯವರಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸಲಾಯಿತು. ಈ ಪ್ರತಿಭಟನಾ ಪಾದಯಾತ್ರೆ ಮೆರವಣಿಗೆಯಲ್ಲಿ ಮಾಜಿ ಸಚಿವರಾದ ವಿನಯ್ […]