ಬೈಂದೂರು, ಕುಂದಾಪುರ ತಾಲೂಕಿನಲ್ಲಿ ಸರಕಾರಿ ಬಸ್ ಸೇವೆ ಆರಂಭಿಸಲು ಆಗ್ರಹಿಸಿ ಧರಣಿ

ಉಡುಪಿ:ಉಡುಪಿ ಜಿಲ್ಲೆಯ ಕುಂದಾಪುರ ಮತ್ತು ಬೈಂದೂರು ತಾಲ್ಲೂಕುಗಳಲ್ಲಿ ಬಸ್ ಸೌಕರ್ಯದಿಂದ ವಂಚಿತವಾಗಿರುವ ಗ್ರಾಮೀಣ ಪ್ರದೇಶಗಳಿಗೆ ಕೆ.ಎಸ್.ಆರ್.ಟಿ.ಸಿ. ಬಸ್ ಸೇವೆ ಆರಂಭಿಸಲು ಒತ್ತಾಯಿಸಿ ವಿದ್ಯಾರ್ಥಿಗಳು ಹಾಗೂ ಕಾರ್ಮಿಕರು ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಧರಣಿ ನಡೆಸಿದರು. ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಶನ್ ಪಡುಕೋಣೆ ಘಟಕ, ಉಡುಪಿ ಜಿಲ್ಲಾ ಹಂಚು ಕಾರ್ಮಿಕರ ಸಂಘ, ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಸಂಘ, ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ಹಾಗೂ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ವತಿಯಿಂದ ಧರಣಿ […]