ಮಲ್ಪೆ ಬಂದರಿನಲ್ಲಿ ಶ್ರಮಿಕರ ಮೇಲಿನ ಗೂಂಡಾಗಿರಿ ಖಂಡಿಸಿ ಪ್ರತಿಭಟನೆ

ಉಡುಪಿ: ಮಲ್ಪೆ ಬಂದರಿನಲ್ಲಿ ಶ್ರಮಿಕರ ಮೇಲಿನ ಗೂಂಡಾಗಿರಿ ಖಂಡಿಸಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್, ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕ‌ರ್ ವಾದ), ಸಹಬಾಳ್ವೆ ಉಡುಪಿ ಜಿಲ್ಲೆ ಹಾಗೂ ಸಮಾನ ಮನಸ್ಕ ಸಂಘಟನೆಗಳ ನೇತೃತ್ವದಲ್ಲಿ ಬುಧವಾರ ಅಜ್ಜರಕಾಡಿನ ಹುತಾತ್ಮ ಸ್ಮಾರಕದ ಬಳಿ ಪ್ರತಿಭಟನೆ ನಡೆಸಿದರು. ದಲಿತ ಮುಖಂಡರಾದ ಸುಂದರ್ ಮಾಸ್ಟರ್ ಮಾತನಾಡಿ, ಮಲ್ಪೆ ಬಂದರಿನಲ್ಲಿ ಎಲ್ಲರಿಗೂ ಸಮಾನವಾಗಿ ದುಡಿಯುವ ಹಕ್ಕಿದೆ. ಸರ್ವ ಜನರಿಗೂ ದುಡಿಯುವ ಹಕ್ಕು ಇದೆ. ಅಲ್ಲಿರುವ ಬಲಾಡ್ಯರು ಹಿರಿಯರು ಮಾಡಿದ ಬಂದರು ಎನ್ನುವಂತೆ […]