ಉಡುಪಿ: ಜ.30 ರಂದು ಸಿಎಎ, ಎನ್ ಸಿ ಆರ್ ವಿರುದ್ದ ಬೃಹತ್ ಪ್ರತಿಭಟನೆ

ಉಡುಪಿ: ಸಹಬಾಳ್ವೆ ಉಡುಪಿ ವತಿಯಿಂದ ಸಮಾನ ಮನಸ್ಕರ ಸಂಘಟನೆಗಳ ಸಹಯೋಗದಲ್ಲಿ ಸಿಎಎ, ಎನ್‌ಆರ್‌ಸಿ ಹಾಗೂ ಎನ್‌ಪಿಆರ್‌ ವಿರೋಧಿಸಿ ಇದೇ 30ರಂದು ಉಡುಪಿಯ ಕ್ರಿಶ್ಚಿಯನ್‌‌ ಪದವಿಪೂರ್ವ ಕಾಲೇಜಿನ ಮೈದಾನದಲ್ಲಿ ಆಯೋಜಿಸಿರುವ ಬೃಹತ್‌ ಪ್ರತಿಭಟನಾ ಸಮಾವೇಶದ ಪೂರ್ವಸಿದ್ಧತೆ ಭರದಿಂದ ಸಾಗಿದೆ ಎಂದು ಸಹಬಾಳ್ವೆ ಉಡುಪಿ ಅಧ್ಯಕ್ಷ ಅಮೃತ್‌ ಶೆಣೈ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಅಂದು ಸಂಜೆ 4 ಗಂಟೆಗೆ ಸಮಾವೇಶ ಆರಂಭವಾಗಲಿದೆ. ಸುಮಾರು 15 ಸಾವಿರಕ್ಕೂ ಹೆಚ್ಚಿನ ಜನರು ಸೇರುವ ನಿರೀಕ್ಷೆ ಇದೆ. ಸಮಾವೇಶದಲ್ಲಿ ಭೀಮ್‌ ಆರ್ಮಿ ಸ್ಥಾಪಕ ಚಂದ್ರಶೇಖರ್‌ […]