ಎಂಡೋಸಲ್ಫಾನ್ ಪೀಡಿತರ ವಿವಿಧ ಬೇಡಿಕೆಗೆ ಆಗ್ರಹಿಸಿ ಪ್ರತಿಭಟನೆ

ಉಡುಪಿ: ಎಂಡೋಸಲ್ಫಾನ್ ಪೀಡಿತರ ಹಾಗೂ ಅಂಗವಿಕಲರ ಮಾಸಾಶಾನ ಹೆಚ್ಚಿಸಬೇಕು ಎನ್ನುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಅಂಗವಿಕಲರ ಹಾಗೂ ಪಾಲಕರ ಒಕ್ಕೂಟದ ಉಡುಪಿ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಅಂಗವಿಕಲರು ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು. ಎಂಡೋಸಲ್ಫಾನ್ ಪೀಡಿತರಿಗೆ ನೀಡುವ ಮಾಸಾಶಾನವನ್ನು ಕ್ರಮವಾಗಿ 1500 ರೂ. ನಿಂದ 3 ಸಾವಿರ ಹಾಗೂ 3 ಸಾವಿರದಿಂದ 6 ಸಾವಿರಕ್ಕೆ ಹೆಚ್ಚಿಸಬೇಕು. ಅಂಗವಿಕಲರಿಗೆ ಅವಶ್ಯವಿರುವ ಸಾಧನ ಸಲಕರಣೆಗಳನ್ನು ಸರಿಯಾದಸಮಯದಲ್ಲಿ ಒದಗಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. […]
ಅತ್ಯಾಚಾರ ಹತ್ಯೆ ಖಂಡಿಸಿ; ನ್ಯಾಯಕ್ಕಾಗಿ ಆಗ್ರಹಿಸಿ ಹಿಂದೂ ಸಂಘಟನೆಗಳಿಂದ ರಾಷ್ಟ್ರಪತಿಗೆ ಮನವಿ

ಉಡುಪಿ: ತೆಲಂಗಾಣಾದಲ್ಲಿ ಪಶುವೈದ್ಯೆ ಪ್ರಿಯಾಂಕಾ ರೆಡ್ಡಿ ಮತ್ತು ತಮಿಳುನಾಡಿನ ರೋಜಾ ಅವರ ಮೇಲೆ ನಡೆದ ಅತ್ಯಾಚಾರ ಹಾಗೂ ಬರ್ಬರ ಹತ್ಯೆಯನ್ನು ಖಂಡಿಸಿ, ಸೂಕ್ತ ನ್ಯಾಯಕ್ಕಾಗಿ ಆಗ್ರಹಿಸಿ ವಿಶ್ವ ಹಿಂದು ಪರಿಷದ್, ಬಜರಂಗದಳ, ಮಾತೃಶಕ್ತಿ, ದುರ್ಗಾವಾಹಿನಿ ಉಡುಪಿ ಜಿಲ್ಲೆಯ ವತಿಯಿಂದ ಗೌರವಾನ್ವಿತ ರಾಷ್ಟ್ರಪತಿಗಳಿಗೆ ಮಾನ್ಯ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಲಾಯಿತು. ವಿಶ್ವ ಹಿಂದು ಪರಿಷದ್ ಉಡುಪಿ ಜಿಲ್ಲಾಧ್ಯಕ್ಷ ಪ್ರಮೋದ್ ಮಂದಾರ್ತಿ, ಜಿಲ್ಲಾ ಉಪಾಧ್ಯಕ್ಷೆ ಸುಪ್ರಭಾ ಆಚಾರ್ಯ, ಬಜರಂಗದಳ ಜಿಲ್ಲಾ ಸುರಕ್ಷಾ ಪ್ರಮುಖ್ ಮಹೇಶ್ ಬೈಲೂರು, ವಿಶ್ವ ಹಿಂದು ಪರಿಷದ್ […]