ಅಕ್ಷತಾ ಪೂಜಾರಿ ಮೇಲೆ ಪೊಲೀಸರ ದೌರ್ಜನ್ಯ ಆರೋಪ: ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆಯ ನೇತೃತ್ವದಲ್ಲಿ ಪ್ರತಿಭಟನೆ

ಉಡುಪಿ: ಅಕ್ಷತಾ ಪೂಜಾರಿ ಮೇಲೆ ಪೊಲೀಸರು ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿ ಹಾಗೂ ಸುಳ್ಳು ಎಫ್ಐಆರ್ ದಾಖಲಿಸಿದ ಪೊಲೀಸ್ ಅಧಿಕಾರಿಗಳನ್ನು ವಜಾಗೊಳಿಸಬೇಕೆಂದು ಆಗ್ರಹಿಸಿ ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆಯ ನೇತೃತ್ವದಲ್ಲಿ ಬಿಲ್ಲವ ಸಮಾಜದವರು ಬ್ರಹ್ಮಾವರ ಪೊಲೀಸ್ ಠಾಣೆಯ ಮುಂಭಾಗದಲ್ಲಿ ಇಂದು ಪ್ರತಿಭಟನೆ ನಡೆಸಿದರು. ಪೊಲೀಸ್ ಠಾಣೆಯ ಮುಂಭಾಗದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸಿದ ಬಿಲ್ಲವ ಸಮಾಜದವರು ಅಕ್ಷತಾ ಪೂಜಾರಿ ಅವರಿಗೆ ಪೊಲೀಸರು ದೌರ್ಜನ್ಯ ಎಸಗಿದ್ದಾರೆ. ಅಲ್ಲದೆ, ಆಕೆ ಹಾಗೂ ಆಕೆಯ ತಾಯಿಯ ವಿರುದ್ಧ ಸುಳ್ಳು ಕೇಸ್ ದಾಖಲಿಸಿದ್ದಾರೆ […]