ಉಡುಪಿ: ಕೇಂದ್ರದ ಜನವಿರೋಧಿ ನೀತಿ ಖಂಡಿಸಿ ಪ್ರತಿಭಟನಾ ಮೆರವಣಿಗೆ

ಉಡುಪಿ: ಕೇಂದ್ರ ಸರಕಾರದ ಜನವಿರೋಧಿ ನೀತಿಯನ್ನು ವಿರೋಧಿಸಿ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕಾರ್ಮಿಕ ಸಂಘಟನೆಗಳು ಇಂದು ಕರೆನೀಡಿದ್ದ ಸಾರ್ವತ್ರಿಕ ಮುಷ್ಕರದ ಪ್ರಯುಕ್ತ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ(ಜೆಸಿಟಿಯು) ಉಡುಪಿ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಉಡುಪಿಯಲ್ಲಿ ಬೃಹತ್  ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಅಜ್ಜರಕಾಡಿನ ಎಲ್‌ಐಸಿ ಕಚೇರಿಯ ಆವರಣದಿಂದ ಹೊರಟ ಕಾರ್ಮಿಕರ ಬೃಹತ್ ಮೆರವಣಿಗೆಯು ಜೋಡುಕಟ್ಟೆ, ಕೆ.ಎಂ.ಮಾರ್ಗ ಮೂಲಕ ಸರ್ವಿಸ್ ಬಸ್ ನಿಲ್ದಾಣದ ಮಹಾತ್ಮ ಗಾಂಧಿ ಪ್ರತಿಮೆ ಸುತ್ತುವರಿದು ಬಿಎಸ್‌ಎನ್‌ಎಲ್ ಕಛೇರಿ ರಸ್ತೆಯಾಗಿ ಕಾರ್ಪೋರೇಶನ್ ಬ್ಯಾಂಕಿನ ಕಚೇರಿ […]