ಮಾಸ್ ಇಂಡಿಯಾ ಮಾಹಿತಿ ಸೇವಾ ಸಮಿತಿಯಿಂದ ಪ್ರತಿಭಟನೆ

ಉಡುಪಿ: ಮಾಹಿತಿ ಹಕ್ಕು ಕಾಯ್ದೆ (ಆರ್‌ಟಿಐ)ಯ ತಿದ್ದುಪಡಿ ವಿರೋಧಿಸಿ ಹಾಗೂ ಸ್ವತಂತ್ರ ಕಾರ್ಯನಿರ್ವಹಣೆಗೆ ಅವಕಾಶ ನೀಡುವಂತೆ ಆಗ್ರಹಿಸಿ ಮಾಸ್ ಇಂಡಿಯಾ ಮಾಹಿತಿ ಸೇವಾ ಸಮಿತಿಯ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿತು. ಮಾಸ್ ಇಂಡಿಯಾ ಮಾಹಿತಿ ಸೇವಾ ಸಮಿತಿಯ ಕರ್ನಾಟಕದ ಅಧ್ಯಕ್ಷ ಜಿ.ಎ. ಕೋಟೆಯಾರ್ ಮಾತನಾಡಿ, ಮಾಹಿತಿ ಹಕ್ಕು ಕಾಯಿದೆಗೆ ತಿದ್ದುಪಡಿ ಮಾಡುವ ಮೂಲಕ ರಾಜಕೀಯ ಭ್ರಷ್ಟಾಚಾರಕ್ಕೆ ಎಡೆ ಮಾಡಿಕೊಡಲಾಗುತ್ತಿದೆ. ಇದರಿಂದ ಜನಪ್ರತಿನಿಧಿಗಳು, ಸರ್ಕಾರಿ ಅಧಿಕಾರಿಗಳು ತಮ್ಮ ಆಸ್ತಿಯನ್ನು ಹೆಚ್ಚಿಸಿಕೊಂಡು ಮುಂದೆ ಅವರೇ ಈ […]