ವೀಡಿಯೋ ಪ್ರಕರಣ: ಜುಲೈ 27 ರಂದು ಕಾಪು ಪೇಟೆಯಲ್ಲಿ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ವತಿಯಿಂದ ಬೃಹತ್ ಪ್ರತಿಭಟನೆ
ಉಡುಪಿ: ಇಲ್ಲಿನ ನೇತ್ರ ಜ್ಯೋತಿ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ಮೂರು ಮಂದಿ ಮುಸ್ಲಿಂ ವಿದ್ಯಾರ್ಥಿನಿಯರು ಕಾಲೇಜಿನ ಶೌಚಾಲಯದಲ್ಲಿ ಹಿಂದೂ ವಿದ್ಯಾರ್ಥಿನಿಯರ ವೀಡಿಯೋ ಚಿತ್ರೀಕರಿಸಿರುವ ಘಟನೆಯನ್ನು ಖಂಡಿಸಿ ಹಾಗೂ ಪೊಲೀಸ್ ಇಲಾಖೆ ಪ್ರಕರಣದ ತನಿಖೆಯನ್ನು ತೀವ್ರಗೊಳಿಸುವಂತೆ ಒತ್ತಾಯಿಸಿ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದ ವತಿಯಿಂದ ಜುಲೈ 27 ರಂದು ಬೆಳಿಗ್ಗೆ 11.00 ಗಂಟೆಗೆ ಕಾಪು ಪೇಟೆಯ ಬಸ್ ನಿಲ್ದಾಣದ ಬಳಿ ಬೃಹತ್ ಪ್ರತಿಭಟನೆ ನಡೆಯಲಿದೆ ಎಂದು ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ ತಿಳಿಸಿದ್ದಾರೆ. […]
ಅನ್ನಭಾಗ್ಯ ಯೋಜನೆಗೆ ಹೆಚ್ಚುವರಿ ಅಕ್ಕಿ ನೀಡಲು ಒಪ್ಪದ ಕೇಂದ್ರ ಸರಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ
ಉಡುಪಿ: ಕಾಂಗ್ರೆಸ್ ಪಕ್ಷದ ಅನ್ನಭಾಗ್ಯ ಯೋಜನೆಗೆ ಹೆಚ್ಚುವರಿ ಅಕ್ಕಿ ನೀಡುವ ನಿರ್ಧಾರದಿಂದ ಹಿಂದೆ ಸರಿದು ಬಡವರ ಅನ್ನ ಕಿತ್ತುಕೊಳ್ಳಲು ಹೊರಟಿರುವ ಕೇಂದ್ರ ಬಿಜೆಪಿ ಸರಕಾರದ ವಿರುದ್ಧ ಉಡುಪಿ ಜಿಲ್ಲಾ ಕಾಂಗ್ರೆಸ್ ನೇತೃತ್ವದಲ್ಲಿ ಉಡುಪಿ ಬ್ರಹ್ಮಗಿರಿ ಸರ್ಕಲ್ ನಲ್ಲಿ ಮಂಗಳವಾರ ಪ್ರತಿಭಟನೆ ನಡೆಸಲಾಯಿತು. ನೂರಾರು ಕಾಂಗ್ರೆಸ್ ಕಾರ್ಯಕರ್ತರು ಕಾಂಗ್ರೆಸ್ ಭವನದಿಂದ ಮೆರವಣಿಗೆಯಲ್ಲಿ ಹೊರಟು ಬ್ರಹ್ಮಗಿರಿ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಸಿದರು. ಕೇಂದ್ರ ಸರಕಾರದ ವಿರುದ್ಧ ಧಿಕ್ಕಾರ ಕೂಗಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಸಚಿವ ವಿನಯಕುಮಾರ್ ಸೊರಕೆ, ಕೇಂದ್ರ […]
ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಸೇನೆಯಿಂದ ಭೂಕಬಳಿಕೆ: ಸ್ಥಳೀಯರಿಂದ ಸೇನೆ ವಿರುದ್ದ ಪ್ರತಿಭಟನೆ
ಇಸ್ಲಾಮಾಬಾದ್: ಇಲ್ಲಿನ ಪಾಕ್ ಆಕ್ರಮಿತ ಕಾಶ್ಮೀರದ ಭಾಗವಾಗಿರುವ ಗಿಲ್ಗಿಟ್ ಮತ್ತು ಬಾಲ್ಟಿಸ್ತಾನ್‌ನ ಸಂಪನ್ಮೂಲ-ಸಮೃದ್ಧ ಪ್ರದೇಶಗಳನ್ನು ಪಾಕ್ ಸರ್ಕಾರ ಮತ್ತು ಸೇನೆಯು ಅತಿಕ್ರಮಿಸುತ್ತಿರುವ ವಿರುದ್ದ ಇಲ್ಲಿನ ಸ್ಥಳೀಯ ನಾಗರಿಕರು ಪ್ರತಿಭಟಿಸುತ್ತಿದ್ದಾರೆ. ಸರ್ಕಾರದ ಶೋಷಕ ನೀತಿಗಳ ವಿರುದ್ಧ ಪಿಒಕೆ ಭಾಗವಾಗಿರುವ ಈ ಪ್ರದೇಶದಲ್ಲಿ ವ್ಯಾಪಕ ಕೋಪ ಮತ್ತು ಅಸಮಾಧಾನವಿದೆ. ಮಾಧ್ಯಮ ವರದಿಗಳ ಪ್ರಕಾರ, ಗಿಲ್ಗಿಟ್ ಬಾಲ್ಟಿಸ್ತಾನದ ಸ್ಥಳೀಯರು ಪಾಕಿಸ್ತಾನದ ಸೇನೆಯ ವಿರುದ್ಧ ಪ್ರತಿಭಟಿಸುತ್ತಿದ್ದಾರೆ ಮತ್ತು ಫ್ರಾಂಟಿಯರ್ ಕಾರ್ಪ್ಸ್ ಅಥವಾ ಪಾಕಿಸ್ತಾನ್ ರೇಂಜರ್‌ಗಳು, ಅರೆಸೈನಿಕ ಪಡೆಗಳು ತಮ್ಮ ಭೂಮಿಯನ್ನು ಆಕ್ರಮಿಸಿಕೊಳ್ಳಲು ಅನುಮತಿಸುವುದಿಲ್ಲ […]
ರಕ್ಷಣಾ ಕಾಯ್ದೆ ಜಾರಿಗೆ ಆಗ್ರಹಿಸಿ ವಕೀಲರ ಸಂಘದಿಂದ ಸಾಂಕೇತಿಕ ಪ್ರತಿಭಟನೆ
ಉಡುಪಿ: ವಕೀಲರ ರಕ್ಷಣಾ ಕಾಯ್ದೆಯನ್ನು ಸರಕಾರ ಶೀಘ್ರವೆ ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಶುಕ್ರವಾರದಂದು ವಕೀಲರ ಸಂಘದಿಂದ ಸಾಂಕೇತಿಕ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾ ನ್ಯಾಯಾಲಯ ಸಂಕೀರ್ಣದ ಮುಂಭಾಗದಲ್ಲಿ ವಕೀಲರೆಲ್ಲ ಜಮಾಯಿಸಿ ಕಾಯ್ದೆಯನ್ನು ಆದಷ್ಟು ಬೇಗ ಜಾರಿಗೆ ತರುವಂತೆ ಸರಕಾರವನ್ನು ಒತ್ತಾಯಿಸಿದರು. ಸಮಾಜದ ರಕ್ಷಣೆಯಲ್ಲಿ ತೊಡಗಿರುವ ವಕೀಲರಿಗೆ ರಕ್ಷಣೆ ಇಲ್ಲ, ಇತ್ತೀಚೆಗೆ ವಕೀಲರ ಮೇಲೆ ಹಲ್ಲೆ ನಡೆಸುವ ಘಟನೆಗಳು ಹೆಚ್ಚುತ್ತಿವೆ. ವಕೀಲರಿಗೂ ರಕ್ಷಣೆ ಅವಶ್ಯ. ಹಿರಿ-ಕಿರಿ ಎಲ್ಲ ವಕೀಲರಿಗೂ ರಕ್ಷಣೆಯ ಅಗತ್ಯವಿದ್ದು, ಸರಕಾರ ಮುಂಬರುವ ಅಧಿವೇಶನದಲ್ಲೇ ಕಾಯ್ದೆಯನ್ನು ಜಾರಿಗೆ ತರುವ […]
ಹೆಜಮಾಡಿ ಟೋಲ್ ನಲ್ಲಿ ದುಪ್ಪಟ್ಟು ಹಣ ಸಂಗ್ರಹ: ಡಿ.29 ರಂದು ಉಡುಪಿ ತಾಲೂಕು ಕಚೇರಿ ಮುಂಭಾಗ ಬೃಹತ್ ಸಾಮೂಹಿಕ ಧರಣಿಗೆ ನಿರ್ಧಾರ
ಉಡುಪಿ: ಸುರತ್ಕಲ್ ಎನ್.ಐ.ಟಿ.ಕೆ ಬಳಿ ಇದ್ದ ಟೋಲ್ ಸುಂಕವನ್ನು ಹೆಜಮಾಡಿ ಟೋಲ್ ನಲ್ಲಿ ಸಂಗ್ರಹಿಸುವ ಹೆದ್ದಾರಿ ಪ್ರಾಧಿಕಾರದ ಆದೇಶ ಜಾರಿಗೊಳ್ಳುವ ಹಿನ್ನೆಲೆಯಲ್ಲಿ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಹಾಗೂ ಉಡುಪಿಯ ಸಮಾನ ಮನಸ್ಕ ಸಂಘಟನೆಗಳ ಮುಖಂಡರು ಅಜ್ಜರಕಾಡಿನ ವಿಮಾ ನೌಕರರ ಸಂಘದ ಕಚೇರಿಯಲ್ಲಿ ಸಭೆ ನಡೆಸಿದರು. ಸುರತ್ಕಲ್ ಟೋಲ್ ಸುಂಕವನ್ನು ಹೆಜಮಾಡಿಯಲ್ಲಿ ಸಂಗ್ರಹಿಸುವ ಹೆದ್ದಾರಿ ಪ್ರಾಧಿಕಾರದ ಆದೇಶ ರಾಜ್ಯ ಸರಕಾರದ ಅಧಿಕೃತ ಒಪ್ಪಿಗೆಯೊಂದಿಗೆ ಪ್ರಕಟಗೊಂಡಿದ್ದು, ಟೋಲ್ ಪ್ಲಾಜಾದ ಮಾಲಕತ್ವ ಹೊಂದಿರುವ ನವಯುಗ ಸಂಸ್ಥೆಯು ಟೋಲ್ ಸಂಗ್ರಹಕ್ಕೆ […]