ಶಾಲಾ ಕ್ರೀಡೋತ್ಸವದಲ್ಲಿ ಅಜಾನ್ ಕೂಗಿಗೆ ಹಿಂದೂ ವಿದ್ಯಾರ್ಥಿನಿಯರಿಂದ ನಮಾಜ್ ಪ್ರಕರಣ: ಪ್ರತಿಭಟನೆ ನಡೆಸಿದ ಹಿಂಜಾವೇ

ಕುಂದಾಪುರ: ಇಲ್ಲಿನ ಶಂಕರನಾರಾಯಣದಲ್ಲಿ ಮದರ್ ಥೆರೆಸಾ ಸಂಸ್ಥೆಯ ಶಾಲಾ ಕ್ರೀಡೋತ್ಸವ ಸಂದರ್ಭದಲ್ಲಿ ಸ್ವಾಗತ ನೃತ್ಯಕ್ಕೆ ಅಜಾನ್ ಕೂಗಿಗೆ ಹಿಂದೂ ವಿದ್ಯಾರ್ಥಿನಿಯರಿಂದ ನಮಾಜ್ ಮಾಡಿಸಿದ ಪ್ರಕರಣ ಸಾಮಾಜಿಕ ಸಾಮಾಜಿಕ ಜಾಲತಾಣಗಳ ಮೂಲಕ ಬೆಳೆಕಿಗೆ ಬಂದ ಬಳಿಕ, ಸಾರ್ವಜನಿಕರಲ್ಲಿ ಆಕ್ರೋಶ ಭುಗಿಲೆದ್ದಿದ್ದು, ಹಿಂದೂ ಜಾಗರಣ ವೇದಿಕೆಯು ಶಾಲೆಯ ಹಿಂದೂ ವಿರೋಧಿ ನೀತಿಯನ್ನು ಖಂಡಿಸಿ ಬುಧವಾರದಂದು ಪ್ರತಿಭಟನೆ ನಡೆಸಿದೆ.

ಸುರತ್ಕಲ್ ಟೋಲ್ ಗೇಟ್ ವಿರುದ್ದದ ಹೋರಾಟಕ್ಕೆ ಸಂಪೂರ್ಣ ಬೆಂಬಲ: ಕೆಪಿಸಿಸಿ ಸದಸ್ಯ ಸುರೇಂದ್ರ ಶೆಟ್ಟಿ

ಸುರತ್ಕಲ್: ಸುರತ್ಕಲ್ ಟೋಲ್ ಗೇಟ್ ಜನತೆಯನ್ನು ಸುಲಿಗೆ ಮಾಡಿ ಹಗಲು ದರೋಡೆ ಮಾಡುತ್ತಿದೆ. ಈ ಟೋಲ್ ಗೇಟ್ ಅನಧಿಕೃತವೆಂದು ಸರಕಾರವೇ ಒಪ್ಪಿಕೊಂಡಿದ್ದರೂ, ಇನ್ನೂ ತೆರವು ಮಾಡದಿರುವುದು ಜಿಲ್ಲೆಯ ಜನತೆಗೆ ಬಗೆದ ದ್ರೋಹ. ಕಾರ್ಕಳದ ಜನರೂ ಇದರಿಂದ ಸಂತ್ರಸ್ತರಾಗಿದ್ದಾರೆ. ಆದ್ದರಿಂದ ಅಕ್ರಮವಾಗಿ ಸುಲಿಗೆ ಮಾಡುತ್ತಿರುವ ಸುರತ್ಕಲ್ ಟೋಲ್ ಗೇಟ್ ಕೂಡಲೇ ಬಂದ್ ಆಗಬೇಕು. ಟೋಲ್ ನ ವಿರುದ್ಧ ನಡೆಯುವ ಯಾವುದೇ ಹೋರಾಟಕ್ಕೂ ನಮ್ಮ ಸಂಪೂರ್ಣ ಬೆಂಬಲವಿದೆ ಎಂದು ಕೆ.ಪಿ.ಸಿ.ಸಿ ಸದಸ್ಯ ಸುರೇಂದ್ರ ಶೆಟ್ಟಿ ಹೇಳಿದರು. ಅವರು ಶನಿವಾರದಂದು ಸುರತ್ಕಲ್ […]

ಮಂಗಳೂರು: ಶೈಕ್ಷಣಿಕ ಸಮಸ್ಯೆಗಳನ್ನು ಖಂಡಿಸಿ ಅಭಾವಿಪ ಪ್ರತಿಭಟನೆ

ಮಂಗಳೂರು: ಲಕ್ಷಾಂತರ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳು ಪ್ರತಿ ವರ್ಷ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಿ ತಮ್ಮ ಶಿಕ್ಷಣಕ್ಕೆ ವಿದ್ಯಾರ್ಥಿ ವೇತನದಿಂದ ಬರುವ ಹಣವನ್ನು ಪೂರಕವಾಗಿ ಬಳಸಿಕೊಳ್ಳುತ್ತಿದ್ದರು. ಆದರೆ ಈ ಬಾರಿ ಪರಿಸ್ಥಿತಿ ಹದಗೆಟ್ಟಿದೆ. ವಿದ್ಯಾರ್ಥಿವೇತನ ತಂತ್ರಾಂಶದಲ್ಲಿ ಅರ್ಜಿಯನ್ನು ಸಲ್ಲಿಸಿದ ನಂತರ ಈ ತಂತ್ರಾಂಶದಲ್ಲಿ ವಿದ್ಯಾರ್ಥಿವೇತನ ಬಿಡುಗಡೆ ಆಗಿರುವುದಾಗಿ ನಮೂದಿಸಲಾಗಿದೆ. ಆದರೆ ಬಹುತೇಕ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಇನ್ನೂ ದೊರೆತಿಲ್ಲ. ಸರಕಾರವು ಈ ವಿಷಯದ ಕುರಿತು ತುರ್ತು ಗಮನ ಹರಿಸಿ ವಿದ್ಯಾರ್ಥಿಗಳಿಗೆ ನೀಡಬೇಕಾದ ವಿದ್ಯಾರ್ಥಿ ವೇತನದ ಹಣವನ್ನು ಬಿಡುಗಡೆಗೊಳಿಸಬೇಕಾಗಿ […]

ಸುರತ್ಕಲ್ ಟೋಲ್ ಗೇಟಿಗೆ ಮುತ್ತಿಗೆ: ಪ್ರತಿಭಟನಾಕಾರರ ಬಂಧನ

ಸುರತ್ಕಲ್: ಅಕ್ಟೋಬರ್ 18 ರಂದು ಟೋಲ್ ಗೇಟ್ ವಿರೋಧಿ ಸಮಿತಿಯಿಂದ ಕರೆಯಲಾಗಿದ್ದ ಪ್ರತಿಭಟನೆಯ ಕಾವು ಜೋರಾಗಿದ್ದು, ಹಲವರ ಬಂಧನವಾಗಿದೆ. ಪ್ರತಿಭಟನಾಕಾರರು ಟೋಲ್ ಗೇಟ್ ಮುತ್ತಿಗೆ ತಡೆಯಲು ಹಾಕಲಾಗಿದ್ದ ಬ್ಯಾರಿಕೇಡ್ ಅನ್ನು ದಾಟಿ ಟೋಲ್ ಗೆ ಮುತ್ತಿಗೆ ಹಾಕಿದ್ದಾರೆ. ಕಾಂಗ್ರೆಸ್ ನಾಯಕ ಮಿಥುನ್ ರೈ ಟೋಲ್ ಗೇಟ್ ಮೇಲೆ ಹತ್ತಿದ್ದು, ಪೊಲೀಸರು ಪ್ರತಿಭಟನಾಕಾರರನ್ನು ತೆರವುಗೊಳಿಸಲು ಲಾಠಿ ಪ್ರಹಾರ ನಡೆಸುತ್ತಿದ್ದಾರೆ. ಈ ಸಂದರ್ಭದಲ್ಲಿ ಕೆಲವರಿಗೆ ಗಾಯಗಳಾಗಿವೆ ಎಂದು ವರದಿಯಾಗಿದೆ. ಪ್ರತಿಭಟನೆಯಲ್ಲಿ ನಿರತರಾಗಿದ್ದ ಮಾಜಿ ವಿಧಾನ್ ಪರಿಷತ್ ಸದಸ್ಯ ಐವನ್ ಡಿಸೋಜಾ, […]

ರಾಹುಲ್ ಗಾಂಧಿ ವಿಚಾರಣೆ, ಪಕ್ಷದ ನಾಯಕರ ಮೇಲಿನ ದೌರ್ಜನ್ಯ ಖಂಡಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ನಿಂದ ಪ್ರತಿಭಟನೆ

ಉಡುಪಿ: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿಯವರ ವಿಚಾರಣೆ ಹಾಗೂ ಪಕ್ಷದ ನಾಯಕರುಗಳ ಮೇಲಿನ ದೌರ್ಜನ್ಯವನ್ನು ಖಂಡಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಜೂನ್ 17 ರಂದು ಬೆಳಗ್ಗೆ 10 ಗಂಟೆಗೆ ಮಣಿಪಾಲ ಕಂಟ್ರಿ ಇನ್ ಹೋಟೆಲ್ ಬಳಿ ಇರುವ ಸರ್ಕಲ್ ನಿಂದ ಜಿಲ್ಲಾಧಿಕಾರಿಗಳ ಕಚೇರಿ ವರೆಗೆ ಪ್ರತಿಭಟನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಅವರ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆಯಲಿದ್ದು, ಜಿಲ್ಲೆಯ ಪಕ್ಷದ ನಾಯಕರುಗಳು, ಬ್ಲಾಕ್ ಅಧ್ಯಕ್ಷರು, ಮುಂಚೂಣಿ […]