ತಮಿಳುನಾಡಿನಲ್ಲಿ ಇಂಧನ ಬೆಲೆ ವಿರುದ್ದ ಪ್ರತಿಭಟನೆ: ಬಿಜೆಪಿ ನಾಯಕ ಅಣ್ಣಾಮಲೈ ವಿರುದ್ದ ಪ್ರಕರಣ ದಾಖಲು
ಚೆನ್ನೈ: ತಮಿಳುನಾಡಿನ ರಾಜ್ಯ ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ ವಿರುದ್ಧ ಅನುಮತಿ ಪಡೆಯದೆ ರಾಜ್ಯ ಸಚಿವಾಲಯದತ್ತ ಮೆರವಣಿಗೆ ನಡೆಸಿ ಪ್ರತಿಭಟನೆ ನಡೆಸಿದ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ. ಎಂಕೆ ಸ್ಟಾಲಿನ್ ನೇತೃತ್ವದ ಡಿಎಂಕೆ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಕಡಿಮೆ ಮಾಡಬೇಕೆಂದು ರಾಜು ಬಿಜೆಪಿ ಒತ್ತಾಯಿಸುತ್ತಿದೆ. ಅಣ್ಣಾಮಲೈ ಮತ್ತು 5,000 ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರ ವಿರುದ್ಧ ತಮಿಳುನಾಡು ಪೋಲೀಸರು ಪ್ರಕರಣ ದಾಖಲಿಸಿದ್ದಾರೆ. ಮೇ 31 ರಂದು ಅಣ್ಣಾಮಲೈ ಅವರೊಂದಿಗೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಾ ರಾಜ್ಯದ […]
ನಮ್ಮೂರಿನ ಶಾಲೆ ಮುಚ್ಚಲು ಬಿಡುವುದಿಲ್ಲ: ಆಡಳಿತ ಸಮಿತಿ, ಗ್ರಾಮಸ್ಥರಿಂದ ಪ್ರತಿಭಟನೆ ಎಚ್ಚರಿಕೆ
ಉಡುಪಿ: ಪಂಚನಬೆಟ್ಟು ವಿದ್ಯಾವರ್ಧಕ ಪ್ರೌಢಶಾಲೆಯ ಎಲ್ಲ ಶಿಕ್ಷಕರು ಹಾಗೂ ಶಿಕ್ಷಕೇತರ ಸಿಬಂದಿಯನ್ನು ಶಿಕ್ಷಣ ಸಂಸ್ಥೆಯ ಅನುಮತಿಯಿಲ್ಲದೆ ಕೌನ್ಸೆಲಿಂಗ್ ಮೂಲಕ ಶಿಕ್ಷಕ ವರ್ಗ ಹಾಗೂ ಶಿಕ್ಷಕೇತರ ಸಿಬಂದಿಯನ್ನು ವರ್ಗಾಯಿಸಲಾಗಿದೆ. ಇದನ್ನೂ ಖಂಡಿಸಿ ಡಿಡಿಪಿಐ ಕಚೇರಿ ಆವರಣದಲ್ಲಿ ಪಂಚನಬೆಟ್ಟು ವಿದ್ಯಾವರ್ಧಕ ಆಡಳಿತ ಸಮಿತಿ, ಹಳೆ ವಿದ್ಯಾರ್ಥಿಗಳು, ಸಮಸ್ಥ ಗ್ರಾಮಸ್ಥರು ಪ್ರತಿಭಟನೆ ನಡೆಸುತ್ತೇವೆ ಎಂದು ಪಂಚನಬೆಟ್ಟು ವಿದ್ಯಾವರ್ಧಕ ಆಡಳಿತ ಸಮಿತಿ ಅಧ್ಯಕ್ಷ ಎ.ನರಸಿಂಹ ಎಚ್ಚರಿಕೆ ನೀಡಿದ್ದಾರೆ. ಈ ಬಗ್ಗೆ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 29 ವರ್ಷದಿಂದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ […]
ದ.ಕ. ಜಿಲ್ಲೆಯಲ್ಲಿ ದಲಿತ ವಿದ್ಯಾರ್ಥಿಗಳ ಸರಣಿ ಅತ್ಯಾಚಾರ ಖಂಡಿಸಿ ಪ್ರತಿಭಟನೆ
ಉಡುಪಿ: ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ದಲಿತ ವಿದ್ಯಾರ್ಥಿಗಳ ಸರಣಿ ಅತ್ಯಾಚಾರ ಖಂಡಿಸಿ ಹಾಗೂ ಅತ್ಯಾಚಾರ ಪ್ರಕರಣಗಳನ್ನು ಸಿಓಡಿ ತನಿಖೆಗೆ ಒಪ್ಪಿಸುವಂತೆ ಆಗ್ರಹಿಸಿ ಉಡುಪಿ ಅಂಬೇಡ್ಕರ್ ಯುವಸೇನೆ ವತಿಯಿಂದ ಅಜ್ಜರಕಾಡಿನ ಸೈನಿಕರ ಹುತಾತ್ಮ ಸ್ಮಾರಕದ ಎದುರು ಬುಧವಾರ ಪ್ರತಿಭಟನೆ ನಡೆಯಿತು. ದಲಿತ ಮುಖಂಡ ಜಯನ್ ಮಲ್ಪೆ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿ, ಬುದ್ಧಿವಂತರ ಜಿಲ್ಲೆಯೆಂದು ಕರೆಯಲ್ಪಡುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿದೆ. ಒಂದೇ ತಿಂಗಳಲ್ಲಿ ಮೂರು ದಲಿತ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ […]
ಮೊಬೈಲ್ ಟವರ್ ಕೆಳಗಡೆ ತರಕಾರಿ ಗಿಡ ನೆಟ್ಟು ಪ್ರತಿಭಟನೆ, 8 ತಿಂಗಳಿಂದ ನೆಟ್ವರ್ಕ್ ವ್ಯತ್ಯಯ
ಮಂಗಳೂರು: ಮೊಬೈಲ್ ನೆಟ್ವರ್ಕ್ ವ್ಯತ್ಯಯ ಆಗುತ್ತಿರುವುದರಿಂದ ಬೇಸತ್ತ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಹರಿಹರ ಪಳ್ಳತ್ತಡ್ಕ ಗ್ರಾಮದ ಗ್ರಾಮಸ್ಥರು ಮೊಬೈಲ್ ಟವರ್ ಬಳಿ ತರಕಾರಿ ಗಿಡಗಳನ್ನು ನೆಡುವ ಮೂಲಕ ವಿನೂತನ ಶೈಲಿಯಲ್ಲಿ ಬುಧವಾರ ಪ್ರತಿಭಟನೆ ನಡೆಸಿದ್ದಾರೆ. ಹರಿಹರ ಪಳ್ಳತ್ತಡ್ಕ ಗ್ರಾಮದಲ್ಲಿ ಕಾರ್ಯಾಚರಿಸುತ್ತಿರುವ ಬಿಎಸ್‍ಎನ್‍ಎಲ್ ಮೊಬೈಲ್ ಟವರ್ ಕಳೆದ ಎಂಟು ತಿಂಗಳಿಂದ ಸರಿಯಾಗಿ ಕಾರ್ಯಾಚರಿಸುತ್ತಿರಲಿಲ್ಲ. ಇದರಿಂದ ಹರಿಹರ, ಬಾಳುಗೋಡು, ಐನಕಿದು, ಕಲ್ಲೇಮಠ, ಕಲ್ಲೇರಿಕಟ್ಟ, ಮಿತ್ತಮಜಲು, ಕಿರಿಭಾಗ ಮೊದಲಾದ ಭಾಗದ ಜನತೆ ತೊಂದರೆ ಅನುಭವಿಸುತ್ತಿದ್ದರು. ಟವರು ಸಿಗ್ನಲ್ ಸಮಸ್ಯೆ […]
ವ್ಯಕ್ತಿಯೋರ್ವನ ಮೇಲೆ ಮಾರಣಾಂತಿಕ ಹಲ್ಲೆ, ಗ್ರಾಮಸ್ಥರಿಂದ ಪ್ರತಿಭಟನೆ
ಕುಂದಾಪುರ: ವ್ಯಕ್ತಿಯೋರ್ವನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಆರೋಪಿಗಳ ವಿರುದ್ಧ ಕ್ರಮಕೈಗೊಳ್ಳದ ಗಂಗೊಳ್ಳಿ ಪೊಲೀಸರ ಕ್ರಮ ಖಂಡಿಸಿ ಹೊಸಪೇಟೆ ಗ್ರಾಮಸ್ಥರು ಗಂಗೊಳ್ಳಿ ಪೊಲೀಸ್ ಠಾಣೆ ಮುಂಭಾಗ ಪ್ರತಿಭಟನೆ ನಡೆಸಿದರು. ಹಲ್ಲೆಗೊಳಗಾದ ವ್ಯಕ್ತಿಗೆ ನ್ಯಾಯ ದೊರಕಿಸಿಕೊಡುವುದನ್ನು ಬಿಟ್ಟು ಆರೋಪಿಗಳ ಪರ ಪೊಲೀಸರು ನಿಂತಿರುವುದನ್ನು ಖಂಡಿಸಿದ ಗಂಗೊಳ್ಳಿ ಪೊಲೀಸ್ ಠಾಣೆಯ ಮುಂಭಾಗದಲ್ಲಿ ನೆರೆದಿದ್ದ ನೂರಾರು ಹೊಸಪೇಟೆ ಗ್ರಾಮಸ್ಥರು ನ್ಯಾಯ ಒದಗಿಸುವಂತೆ ಒತ್ತಾಯಿಸಿದರು. ತ್ರಾಸಿ ಸಮೀಪದ ಹೊಸಪೇಟೆ ನಿವಾಸಿ ಶಿವರಾಜ್ ಖಾರ್ವಿ (26) ಮೂಲತ: ಚಾಲಕನಾಗಿದ್ದು, ಸೋಮವಾರ ರಾತ್ರಿ ಗೋವಾಕ್ಕೆ ಬಾಡಿಗೆಗೆ […]