ಸಫಾಯಿ ಕರ್ಮಚಾರಿಗಳಿಗೆ ಸರಕಾರದ ಯೋಜನೆಗಳ ಪ್ರಯೋಜನ ಒದಗಿಸಿ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ.

ಉಡುಪಿ: ಸಫಾಯಿ ಕರ್ಮಚಾರಿಗಳಿಗೆ ಸರಕಾರದ ವಿವಿದ ಯೋಜನೆಗಳು ಹಾಗೂ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸುವುದರೊಂದಿಗೆ ಫಲಾನುಭವಿಗಳನ್ನಾಗಿಸಿ ಅವರುಗಳು ಆರ್ಥಿಕವಾಗಿ ಸಬಲರನ್ನಾಗಿಸುವ ಕಾರ್ಯವನ್ನು ಅಧಿಕಾರಿಗಳು ಮಾಡಬೇಕೆಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ತಿಳಿಸಿದರು. ಅವರು ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ, ಸಫಾಯಿ ಕರ್ಮಚಾರಿಗಳ ಜಿಲ್ಲಾ ಜಾಗೃತ ಸಮಿತಿಯ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಫಾಯಿ ಕರ್ಮಚಾರಿಗಳ ಪುರ್ನವಸತಿ ಸೇರಿದಂತೆ ಅವರುಗಳು ಕಲ್ಯಾಣಾಭಿವೃದ್ದಿಗಾಗಿ ಸರಕಾರದ ಅನೇಕ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ರೂಪಿಸಿ ಜಾರಿಗೆ ತರುತ್ತಿದೆ. ಇದರ ಲಾಭವನ್ನು ಅವರುಗಳು […]