ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ ಅನುದಾನ ಒದಗಿಸಿ: ಪ್ರಧಾನಿಗೆ ಮನವಿ ಮಾಡಿದ ಡಿಸಿಎಂ

ಬೆಂಗಳೂರು: ಬೆಂಗಳೂರು ನಗರದ ಸಮಗ್ರ ಅಭಿವೃದ್ಧಿಗಾಗಿ ಕೈಗೊಂಡಿರುವ ಯೋಜನೆಗಳ ಅಂದಾಜು ವೆಚ್ಚ ₹ 1.50 ಲಕ್ಷ ಕೋಟಿಯಾಗಿದ್ದು, ಕೇಂದ್ರ ಸರ್ಕಾರವು ಸಮರ್ಪಕ ಅನುದಾನವನ್ನು ಒದಗಿಸಬೇಕು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದ್ದಾರೆ.ಸುರಂಗ ರಸ್ತೆ, ಆರ್ಟಿಲರಿ ರಸ್ತೆಗಳ ಬಳಿ ಎಲಿವೇಟೆಡ್ ಕಾರಿಡಾರ್ ನಿರ್ಮಾಣ, ಪೆರಿಫೆರಲ್ ವರ್ತುಲ ರಸ್ತೆ, ಘನತ್ಯಾಜ ವಿಲೇವಾರಿ ಸೇರಿದಂತೆ ಇತರೇ ಮೂಲಸೌಕರ್ಯಗಳ ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗಿದೆ ಎಂದು ಮನವಿ ಪತ್ರದಲ್ಲಿ ತಿಳಿಸಿದ್ದಾರೆ. ‘ಕರ್ನಾಟಕವು ವರ್ಷಕ್ಕೆ ಸುಮಾರು […]