ಪ್ರಚೋದನಕಾರಿ ಭಾಷಣ: ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಎಫ್ಐಆರ್ ದಾಖಲು.

ಮಂಗಳೂರು: ಪುತ್ತೂರಿನ ಉಪ್ಪಳಿಗೆಯಲ್ಲಿ ಈಚೆಗೆ ನಡೆದ ದೀಪೋತ್ಸವ ಕಾರ್ಯಕ್ರಮದಲ್ಲಿ ಧಾರ್ಮಿಕ ದ್ವೇಷ ಪ್ರಚೋದಿಸುವ, ಮಹಿಳೆಯರ ಘನತೆಗೆ ಧಕ್ಕೆಯುಂಟುಮಾಡುವ ರೀತಿಯಲ್ಲಿ ಭಾಷಣ ಮಾಡಿದ ಆರೋಪದ ಮೇಲೆ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್ಎಸ್) ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಹಾಗೂ ಕಾರ್ಯಕ್ರಮದ ಆಯೋಜಕರ ವಿರುದ್ಧ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ‘ಕಲ್ಲಡ್ಕ ಪ್ರಭಾಕರ ಭಟ್ ಅವರ ಭಾಷಣವು ಯೂಟ್ಯೂಬ್ ಚಾನೆಲ್ ಒಂದರಲ್ಲಿ ಪ್ರಸಾರಗೊಂಡಿದೆ. ಧಾರ್ಮಿಕ ದ್ವೇಷ ಪ್ರಚೋದಿಸುವ, ಮಹಿಳೆಯರ ಘನತೆಗೆ ಧಕ್ಕೆ ಉಂಟುಮಾಡುವ ಹಾಗೂ ಸಾರ್ವಜನಿಕ ಶಾಂತಿಗೆ ಅಪಾಯ […]