ಸಾಧನೆಗೆ ಗುರುವಿನ ಮಾರ್ಗದರ್ಶನ ಅಗತ್ಯ: ಪಿ.ಎಸ್. ಎಡಪಡಿತ್ತಾಯ

ಉಡುಪಿ: ಜೀವನದಲ್ಲಿ ಸಾಧನೆ ಮಾಡಬೇಕಾದರೆ ಗುರುವಿನ ಮಾರ್ಗದರ್ಶನ, ನಿರ್ದಿಷ್ಟ ಗುರಿ, ಯೋಗ್ಯತೆ ಹಾಗೂ ದೈವಿ ಶಕ್ತಿ ಮುಖ್ಯ. ಇವುಗಳನ್ನು ಬ್ರಾಹ್ಮಣರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪಿ.ಎಸ್. ಎಡಪಡಿತ್ತಾಯ ಹೇಳಿದರು. ಉಡುಪಿ ಸೌತ್ ಕೆನರಾ ಕಾಸರಗೋಡು ದ್ರಾವಿಡ ಬ್ರಾಹ್ಮಣ ಎಜುಕೇಶನ್ ಸೊಸೈಟಿಯ ವತಿಯಿಂದ ಉಡುಪಿ ಅದಮಾರು ಗೆಸ್ಟ್‌ಹೌಸ್ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಬ್ರಾಹ್ಮಣ ಸಮುದಾಯದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಬ್ರಾಹ್ಮಣಿಕೆಯ ಮೂಲಕ ಮಾನವೀಯತೆ ಮೆರೆದರೆ ಉತ್ತಮ ಬ್ರಾಹ್ಮಣರಾಗಲು […]