ಸರ್ಕಾರಿ ಪ.ಪೂ ಕಾಲೇಜುಗಳಲ್ಲಿ ಬಂಪರ್ ದಾಖಲಾತಿ: ಪಾಳಿಯಲ್ಲಿ ತರಗತಿಗಳನ್ನು ನಡೆಸಲು ನಿರ್ಧರಿಸಿದ ಸರಕಾರ
ಬೆಂಗಳೂರು: 2022-23ನೇ ಶೈಕ್ಷಣಿಕ ವರ್ಷದಲ್ಲಿ ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳು ಪಾಳಿಯ ಆಧಾರದ ಮೇಲೆ ಕಾರ್ಯನಿರ್ವಹಿಸಲಿವೆ ಎಂದು ಪ.ಪೂ ಶಿಕ್ಷಣ ಇಲಾಖೆಯು ತಿಳಿಸಿದೆ. ತನ್ನ ಪ.ಪೂ ಕಾಲೇಜುಗಳಲ್ಲಿ ಪ್ರವೇಶಾತಿಗಿರುವ ಬೇಡಿಕೆಯನ್ನು ಪರಿಗಣಿಸಿ, ಸರ್ಕಾರವು ಎರಡು ಪಾಳಿಯಲ್ಲಿ ತರಗತಿಗಳನ್ನು ನಡೆಸಲು ನಿರ್ಧರಿಸಿದೆ. ಆದಾಗ್ಯೂ, ಈ ವ್ಯವಸ್ಥೆಯು ಹೆಚ್ಚಿನ ಸಂಖ್ಯೆಯ ಪ್ರವೇಶಾತಿಗಳಿರುವ ಕಾಲೇಜುಗಳಿಗೆ ಮಾತ್ರ ಸೀಮಿತವಾಗಿರುತ್ತದೆ. ಸಂಖ್ಯೆ ಎಷ್ಟಿದ್ದರೂ ಸರ್ಕಾರಿ ಪ.ಪೂ ಕಾಲೇಜುಗಳು ಯಾವುದೇ ವಿದ್ಯಾರ್ಥಿಯ ಪ್ರವೇಶವನ್ನು ನಿರಾಕರಿಸುವಂತಿಲ್ಲ. ತರಗತಿಗಳು ಪಾಳಿಯಲ್ಲಿ ನಡೆಯುವುದನ್ನು ದೃಢಪಡಿಸಿದ ಪ್ರಾಥಮಿಕ ಮತ್ತು ಪ್ರೌಢ […]
ಮುಂದಿನ ಶೈಕ್ಷಣಿಕ ವರ್ಷದಿಂದ ಪ.ಪೂ ವಿದ್ಯಾರ್ಥಿಗಳಿಗೆ ಸಮವಸ್ತ್ರ ಕಡ್ಡಾಯ
ಬೆಂಗಳೂರು: ರಾಜ್ಯದಲ್ಲಿ ನಡೆದ ಹಿಜಾಬ್ ಗದ್ದಲದಿಂದಾಗಿ 2022-23 ಸಾಲಿನ ಶೈಕ್ಷಣಿಕ ವರ್ಷದಲ್ಲಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಸಮವಸ್ತ್ರವನ್ನು ಕಡ್ಡಾಯಗೊಳಿಸಲು ಪ.ಪೂ ಶಿಕ್ಷಣ ಇಲಾಖೆ ನಿರ್ಧರಿಸಿದೆ. ಸೋಮವಾರ ಬಿಡುಗಡೆ ಮಾಡಲಾದ ಇಲಾಖೆಯ ಪ್ರವೇಶ ಮಾರ್ಗಸೂಚಿಯಲ್ಲಿ ಸಮವಸ್ತ್ರದ ಬಗ್ಗೆ ಇದೇ ಮೊದಲ ಬಾರಿಗೆ ಉಲ್ಲೇಖಿಸಲಾಗಿದೆ. ಮಾರ್ಗಸೂಚಿಗಳಲ್ಲಿ ತಿಳಿಸಿರುವಂತೆ ಪದವಿ ಪೂರ್ವ ವಿಶ್ವವಿದ್ಯಾಲಯದ ಮೊದಲನೇ ಮತ್ತು ಎರಡನೇ ವರ್ಷದ ವಿದ್ಯಾರ್ಥಿಗಳು ಸಂಬಂಧಪಟ್ಟ ಕಾಲೇಜು ಅಭಿವೃದ್ಧಿ ಸಮಿತಿಗಳು(ಸಿಡಿಸಿ) ಸೂಚಿಸಿದ ಏಕರೂಪದ ಮಾನದಂಡಗಳಿಗೆ ಬದ್ದರಾಗಿರಬೇಕು. ಇಲಾಖೆಯ ಸೂಚನೆಗಳ ಪ್ರಕಾರ, ವಿದ್ಯಾರ್ಥಿಗಳು ಹಿಜಾಬ್ ಕುರಿತು […]
ಪೋಷಕರೆ ಖಾಸಗಿ ಪದವಿಪೂರ್ವ ಕಾಲೇಜುಗಳ ಮಾನ್ಯತೆ ಖಚಿತಪಡಿಕೊಳ್ಳಿ: ಪದವಿ ಪೂರ್ವ ಶಿಕ್ಷಣ ಇಲಾಖೆ
ಉಡುಪಿ: ರಾಜ್ಯದ ಉಚ್ಛ ನ್ಯಾಯಾಲಯದ ಆದೇಶದಂತೆ, ಜಿಲ್ಲೆಯಲ್ಲಿರುವ ಖಾಸಗಿ ಪದವಿ ಪೂರ್ವ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿಗೆ ಸಂಬಂಧಿಸಿದಂತೆ, ಆಯಾ ಕಾಲೇಜುಗಳು ಅಸ್ತಿತ್ವದಲ್ಲಿರುತ್ತದೆಯೇ ಅಥವಾ ಮಾನ್ಯತೆ ಪಡೆದಿದೆಯೇ ಎಂಬುದನ್ನು ವಿದ್ಯಾರ್ಥಿಗಳು ಹಾಗೂ ಪೋಷಕರು ಖಚಿತಪಡಿಸಿಕೊಂಡ ನಂತರವೇ ಪದವಿಪೂರ್ವ ತರಗತಿಗಳಿಗೆ ದಾಖಲಾಗುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.